ETV Bharat / city

ಬುಡಕಟ್ಟು ಸಮುದಾಯ ಏಳಿಗೆ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕೇಂದ್ರದ ಮೆಚ್ಚುಗೆ: ಡಿಸಿಎಂ ಕಾರಜೋಳ - ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ

ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರೊಂದಿಗೆ ಡಿಸಿಎಂ ಗೋವಿಂದ ಕಾರಜೋಳ ಇಂದು ವಿಡಿಯೋ ಸಂವಾದ ನಡೆಸಿ, ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿವರಿಸಿದರು.

DCM Govinda Karajola video conference with Union tribal minister Arjun Munda
ಬುಡಕಟ್ಟು ಸಮುದಾಯದ ಏಳಿಗೆ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಕೇಂದ್ರದ ಮೆಚ್ಚುಗೆ: ಡಿಸಿಎಂ ಕಾರಜೋಳ
author img

By

Published : Sep 3, 2020, 8:46 PM IST

ಬೆಂಗಳೂರು: ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ತಂದಿರುವ ಯೋಜನೆಗಳನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದು, ಕೇಂದ್ರ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

DCM Govinda Karajola video conference with Union tribal minister Arjun Munda
ಬುಡಕಟ್ಟು ಸಮುದಾಯದ ಏಳಿಗೆ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಕೇಂದ್ರದ ಮೆಚ್ಚುಗೆ: ಡಿಸಿಎಂ ಕಾರಜೋಳ

ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರೊಂದಿಗೆ ಡಿಸಿಎಂ ಗೋವಿಂದ ಕಾರಜೋಳ ಇಂದು ವಿಡಿಯೋ ಸಂವಾದ ನಡೆಸಿದರು. ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿವರಿಸಿದ ಡಿಸಿಎಂ, ಬುಡಕಟ್ಟು ಜನರು ವಾಸಿಸುವ ಅರಣ್ಯ ಪ್ರದೇಶಗಳಲ್ಲಿರುವ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕದ 10 ಸಂಚಾರಿ ಆರೋಗ್ಯ ಘಟಕಗಳನ್ನು ಪ್ರಾರಂಭಿಸಲಾಗುವುದು. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಸಮುದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ರಾಜ್ಯದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳ ಸಮುದಾಯ ಆರೋಗ್ಯ ಕೋಶದಡಿ ಬುಡಕಟ್ಟು ಆರೋಗ್ಯ ಘಟಕವನ್ನು ಪ್ರಾರಂಭಿಸಲಾಗುತ್ತದೆ. ರಾಜ್ಯದಲ್ಲಿರುವ 10 ವೈದ್ಯಕೀಯ ಮಹಾವಿದ್ಯಾಲಯ ಅಥವಾ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಧರ್ಮಶಾಲೆ ಪ್ರಾರಂಭಿಸಿ, ಆದಿವಾಸಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಬುಡಕಟ್ಟು ಜನರ ಪಾರಂಪರಿಕ ವೈದ್ಯ ಪದ್ಧತಿಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ತಯಾರಿಕೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಕಿರಿ ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಡಿ ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ನೆರವು ನೀಡಲಾಗುತ್ತದೆ ಎಂದರು.

19 ಪ್ರಧಾನ ಮಂತ್ರಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಕೇಂದ್ರಕ್ಕೆ ತಲಾ 15 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಬುಡಕಟ್ಟು ಜನರು ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯವರ್ಧಿಸಿ ಮಾರುಕಟ್ಟೆ ಒದಗಿಸಲು ಮೈಸೂರಿನ ಸಿಎಫ್‍ಟಿಆರ್​ಐ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯೊಂದಿಗೆ ನಾನ್ ಟಿಂಬರ್ ಫಾರೆಸ್ಟ್ ಪ್ರೊಡೆಕ್ಟ್ ಕಲೆಕ್ಟರ್ ಎಂಟರ್​ಪ್ರೈಸಸ್ ಸ್ಥಾಪಿಸಲಾಗುತ್ತಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗಪೂರ್ ಬಳಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೊಂಡ 228 ಕುಟುಂಬಗಳಿಗೆ ರೈತ ಉತ್ಪಾದಕರ ಸಂಸ್ಥೆ ಸ್ಥಾಪಿಸಲು ಸಮೀಕ್ಷೆ ಕಾರ್ಯ ನಡೆಯುತ್ತಿದೆ. 2,667 ಕುಟುಂಬಗಳಿಗೆ ಹೈನುಗಾರಿಕೆ, ಕುರಿ, ಮೇಕೆ, ಗೂಡ್ಸ್ ವಾಹನ ಸೇರಿದಂತೆ ಇತರ ಜೀವನೋಪಾಯ ಕಾರ್ಯಕ್ರಮಗಳಿಗೆ 21 ಕೋಟಿ ರೂ. ನೆರವು ನೀಡಲಾಗಿದೆ. ಬಿಳಿಗಿರಿ ರಂಗನ ಬೆಟ್ಟದಲ್ಲಿನ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕುಪತ್ರ ಪಡೆದಿರುವ 448 ಕುಟುಂಬಗಳು ಇಲಾಖೆಯ ನೆರವಿನೊಂದಿಗೆ ರೈತ ಉತ್ಪಾದನಾ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಕಾಫಿ ಬೋರ್ಡ್ ನ ತಾಂತ್ರಿಕ ಸಹಾಯದಿಂದ ಕಾಫಿ ಮತ್ತು ಮೆಣಸು ಬೆಳೆಗಳಿಗೆ ಪ್ರೋತ್ಸಾಹಿಸಿ ಈ ಕುಟುಂಬಗಳ ಆದಾಯವನ್ನು ಶೇ. 16 ರಿಂದ ಶೇ.43 ರಷ್ಟು ಅಭಿವೃದ್ಧಿಪಡಿಸಲಾಗಿದೆ. ಬುಡಕಟ್ಟು ಸಮುದಾಯದ ಏಳಿಗೆಗೆ ಪೂರಕವಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಕೇಂದ್ರ ಬುಡಕಟ್ಟು ಸಚಿವರಿಗೆ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.