ಬೆಂಗಳೂರು: ಕೋವಿಡ್-19 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಲಾಗಿದೆ.
ಕೋವಿಡ್‌ನ ಸಂಕಷ್ಟಗಳನ್ನ ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ, ಇನ್ನುಳಿದ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ , ಜೂನ್ 2021ರ ತಿಂಗಳಿಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇ. 50 ರಷ್ಟಕ್ಕೆ ವಿನಾಯಿತಿ ನೀಡಿ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಆದೇಶ ಹೊರಡಿಸಿದ್ದಾರೆ.