ETV Bharat / city

ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್​: ಪೊಲೀಸ್ ಇಲಾಖೆಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ - Karnataka Police Department

ಕರ್ನಾಟಕ ಪೊಲೀಸ್ ಇಲಾಖೆಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದೆ.

Bangalore
ಪೊಲೀಸ್ ಇಲಾಖೆಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ
author img

By

Published : Jul 6, 2021, 10:22 AM IST

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧೆಡೆ ಖಾಲಿಯಿರುವ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯ ಆಹ್ವಾನಿಸಲಾಗಿತ್ತು. ಈ ಹಿಂದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 7ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಈ ಅವಧಿಯಲ್ಲಿ ಬಹುತೇಕ ಸಮಯ ಲಾಕ್‌ಡೌನ್ ಇದ್ದಿದ್ದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಜುಲೈ 20ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿವರ

ಹುದ್ದೆಗಳ ಸಂಖ್ಯೆ: 84 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ. 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 250 ರೂ. ಹಾಗೂ ಎಸ್​​ಸಿ, ಎಸ್​​ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 100 ಶುಲ್ಕ.

ವಯಸ್ಸು: ದಿನಾಂಕ 20-07-2021ಕ್ಕೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ /ಎಸ್ಎಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ https://recruitment.ksp.gov.in ಸಲ್ಲಿಸಬೇಕು.

ಇದನ್ನೂ ಓದಿ: Video: ಹೆಲಿಕಾಪ್ಟರ್ ಮೂಲಕ ಮಾವನ ಮನೆಗೆ ಹಾರಿ ಬಂದ ಸೊಸೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.