ಬೆಂಗಳೂರು : ರಾಜ್ಯದ ಕಾರ್ಮಿಕರಿಗೆ ಅನುಕೂಲತೆಗಳನ್ನ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ನಿರ್ಣಯ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ದಿನಗೂಲಿ ಕಾರ್ಮಿಕರ ಪರ ಉತ್ತರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯ ನೆರೆವು ನೀಡಲಾಗ್ತಿದೆ. ನಮ್ಮ ರಾಜ್ಯದಲ್ಲೂ ಸಹ ಕಾರ್ಮಿಕರ ಪರ ಯಾವ ಕ್ರಮಕೈಗೊಳ್ಳಬೇಕು ಎಂಬುದನ್ನು ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇಂದು ಈ ಸಂಬಂಧ ಸಿಎಂ ಕಾರ್ಮಿಕ ಇಲಾಖೆ ಹಾಗೂ ಕಾರ್ಮಿಕ ಸಂಘಟನೆಗಳ ಜತೆಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಚರ್ಚಿಸಿ ಸಿಎಂ ಮಾರ್ಗದರ್ಶನದಂತೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾರ್ಮಿಕರಿಗೆ ಅನುಕೂಲ ಆಗುವ ರೀತಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಕಾರ್ಮಿಕರು ಹಾಗೂ ಮಾಲೀಕರನ್ನು ದೃಷ್ಟಿಯಲ್ಲಿರಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಮುಖ್ಯವಾಗಿ ಅವರೆಲ್ಲರ ಆರೋಗ್ಯವನ್ನೂ ಗಮನದಲ್ಲಿರಿಸಿಕೊಂಡಿದ್ದೇವೆ ಎಂದರು.