ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಕೆಎಸ್ಆರ್ಟಿಸಿ ವತಿಯಿಂದ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿಯಾಗಿ 1000 ಬಸ್ಗಳನ್ನ ನಿಯೋಜನೆ ಮಾಡಲಾಗಿದೆ.
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ ಸೇರಿದಂತೆ ಮೈಸೂರು, ಮಡಿಕೇರಿ, ಕಾರವಾರ ರಾಯಚೂರು, ಬಳ್ಳಾರಿ, ಕಾರವಾರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹೊರನಾಡು, ಶೃಂಗೇರಿ, ಕುಂದಾಪುರದ ಮುಂತಾದ ಸ್ಥಳಗಳಿಗೆ ಬಸ್ ಸಂಚಾರ ಕಲ್ಪಿಸಲಾಗಿದೆ.
ಇನ್ನು, ಅಂತಾರಾಜ್ಯಗಳ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೆ ನವೆಂಬರ್ 7ರವರೆಗೆ ವಿಶೇಷ ವಾಹನ ವ್ಯವಸ್ಥೆ ಇದೆ.
ಪ್ರಯಾಣ ದರ ಹೆಚ್ಚಳವಿಲ್ಲ : ಹೆಚ್ಚುವರಿ ವಿಶೇಷ ಸಾರಿಗೆ ಬಸ್ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಸಾಮಾನ್ಯ ದರವನ್ನೇ ವಿಧಿಸಲಾಗುತ್ತದೆ. ನಿಗಮದ ವೆಬ್ಸೈಟ್ ಹಾಗೂ ಆನ್ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದೆ.