ಬೆಂಗಳೂರು: ನೈಸ್ (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸೆಸ್) ಸಂಸ್ಥೆ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಆದೇಶಿಸಿದೆ.
ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ್ರು, ಸಂಸ್ಥೆಯ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೈಸ್ ಸಂಸ್ಥೆ 2012ರಲ್ಲಿ ಸಿವಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಸಂಸ್ಥೆಯ ವರ್ಚಸ್ಸು ಹಾಗೂ ಗೌರವಕ್ಕೆ ಹಾನಿ ಮಾಡಿರುವುದಕ್ಕೆ 10 ಕೋಟಿ ಪರಿಹಾರ ಕೊಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾದ ಮಲ್ಲನಗೌಡ ಅವರು 2 ಕೋಟಿ ನಷ್ಟ ಪರಿಹಾರ ನೀಡುವಂತೆ ದೇವೇಗೌಡರಿಗೆ ಆದೇಶಿಸಿದ್ದಾರೆ. ಸಂಸ್ಥೆಯ ವಿರುದ್ಧ ಮಾಡಿದ್ದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಎಚ್.ಡಿ ದೇವೇಗೌಡರು ವಿಫಲರಾದ ಹಿನ್ನೆಲೆಯಲ್ಲಿ ನಷ್ಟ ಪರಿಹಾರವನ್ನು ಸಂಸ್ಥೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.