ETV Bharat / city

ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? : ಸಂಪುಟ ವಿಸ್ತರಣೆ ವಿಳಂಬಕ್ಕೆ ಸಿದ್ದು ತರಾಟೆ - ಸಿದ್ದರಾಮಯ್ಯ ಟ್ವೀಟ್​​

ದಿನದಿಂದ ದಿನಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಿವುದಕ್ಕೆ ಸಿದ್ದರಾಮಯ್ಯ ಟ್ವೀಟ್​​ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Aug 3, 2019, 12:38 PM IST

ಬೆಂಗಳೂರು: ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬವಾಗುತ್ತಿರುವುದರ ವಿರುದ್ಧ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಖಾರವಾಗಿ ಪ್ರಶ್ನಿಸಿದ್ದಾರೆ.

  • ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು @BSYBJP ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?@INCKarnataka
    1/3

    — Siddaramaiah (@siddaramaiah) August 3, 2019 " class="align-text-top noRightClick twitterSection" data=" ">

ಮೂರು ಪ್ರತ್ಯೇಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ರಾಜ್ಯಪಾಲರು, ಇಬ್ಬರ ವಿರುದ್ಧವೂ ಕಿಡಿಕಾರಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಆಸಕ್ತಿಯನ್ನು ಬಿಎಸ್​​ವೈ ಹಾಗೂ ಬಿಜೆಪಿ, ಸಚಿವ ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಆಡಳಿತ ಯಂತ್ರ ಸ್ಥಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ..? ಏಕಚಕ್ರಾಧಿಪತ್ಯವೇ? ಎಂದು ತಮ್ಮ ಮೊದಲ ಟ್ವೀಟ್​​ನಲ್ಲಿ ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

  • ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.
    ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?
    ಸಂಪುಟ ವಿಸ್ತರಣೆಯದ್ದೇ?@INCKarnataka
    2/3

ಎರಡನೇ ಟ್ವೀಟ್​​ನಲ್ಲಿ ಅತಿವೃಷ್ಟಿ, ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ? ಸಂಪುಟ ವಿಸ್ತರಣೆಯದ್ದೇ ? ಎಂದು ಮುಖ್ಯಮಂತ್ರಿಗಳನ್ನ ಕೇಳಿದ್ದಾರೆ.

  • ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?@INCKarnataka
    3/3

ಇನ್ನು ಮೂರನೇ ಟ್ವೀಟ್​​ನಲ್ಲಿ, ವಿಶ್ವಾಸಮತ ಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ಎಂದು ರಾಜ್ಯಪಾಲರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

Intro:ಇದೇನು ಪ್ರಜಾಪ್ರಭುತ್ವವೇ ? ಏಕ್ಚಕ್ರಾಧಿಪತ್ಯವೇ...?
ಸಂಪುಟ ವಿಸ್ತರಣೆ ವಿಳಂಬಕ್ಕೆ ಸಿಎಂಗೆ ಸಿದ್ದು ತರಾಟೆ

ಬೆಂಗಳೂರು : ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬ ವಾಗುತ್ತಿರುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಟೀಕಿಸಿದ್ದಾರೆ. ಇದೇನು ಪ್ರಜಾಪ್ರಭುತ್ವ ವೇ...? ಏಕಚಕ್ರಾಧಿಪತ್ಯವೇ..? ಎಂದು ನೂತನ ಸಿಎಂ ನಡೆಯನ್ನು ಪ್ರಶ್ನಿಸಿ ದ್ದಾರೆ.

ಮುಖ್ಯಮಂತ್ರಿಗಳ ಕ್ರಮವನ್ನು ಖಂಡಿಸಿ ಮೂರು ಪ್ರತ್ಯೇಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಯಡಿಯೂರಪ್ಪ ಹಾಗು ರಾಜ್ಯಪಾಲರು ಇಬ್ಬರನ್ನೂ ಕುಟುಕಿದ್ದಾರೆ.

Body: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಆಸಕ್ತಿಯನ್ನು ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆಂದು ಪ್ರಶ್ನಿಸಿ ದ್ದಾರೆ.ಅತೀವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಆಡಳಿತ ಯಂತ್ರ ಸ್ಥಬ್ಧವಾಗಿದೆ.ಇದೇನು ಪ್ರಜಾಪ್ರಭುತ್ವ ವೇ..? ಏಕಚಕ್ರಾಧಿಪತ್ಯವೇ ಎಂದು ಮೊದಲ ಟ್ವೀಟ್ ನಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ.

ಎರಡನೇ ಟ್ವೀಟ್ ನಲ್ಲಿ ಅತಿವೃಷ್ಟಿ , ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ...? ಸಂಪುಟ ವಿಸ್ತರಣೆಯದ್ದೇ..? ಎಂದು ಮುಖ್ಯಮಂತ್ರಿ ಗಳನ್ನ ಕೇಳಿದ್ದಾರೆ.

Conclusion: ಮೂರನೇ ಟ್ವೀಟ್ ನಲ್ಲಿ ರಾಜ್ಯಪಾಲರನ್ನು ಟೀಕಿಸಿರುವ ಸಿದ್ದಾರಮಯ್ಯನವರು..." ವಿಶ್ವಾಸಮತ ಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ಎಂದು ಪ್ರಶಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.