ಬೆಂಗಳೂರು : ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆ (ಐಸಿಡಿಎಸ್) ಅಡಿ ಮಕ್ಕಳು, ಗರ್ಭಿಣಿಯರು ಮತ್ತು ಎದೆ ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶಯುಕ್ತ ಮತ್ತು ಗುಣಮಟ್ಟದ ಆಹಾರ ಪೂರೈಸುವುದನ್ನು ಖಾತರಿಪಡಿಸಲು ‘ಪೂರಕ ಪೌಷ್ಟಿಕಾಂಶ ತಯಾರಿ ಮಹಿಳಾ ತರಬೇತಿ ಕೇಂದ್ರಗಳನ್ನು (ಎಂಎಸ್ಪಿಟಿಸಿ) ರಚಿಸಿದ್ದ ಆದೇಶವನ್ನು ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಂಗೀತಾ ಗದುಗಿನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
ಅಲ್ಲದೆ, ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕಾಂಶಯುಕ್ತ ಆಹಾರ ಪೂರೈಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಹುಡುಕುವ ಸಂಬಂಧ ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಒಪ್ಪಿಕೊಳ್ಳುವ ಕುರಿತಂತೆ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕು ಎಂದು ನಿರ್ದೇಶಿಸಿದೆ.
ಓದಿ : ಈಶ್ವರಪ್ಪರನ್ನು ಬಂಧಿಸಿ ಕಾಂಗ್ರೆಸ್ ನಾಯಕರು ಏನು ಮಾಡುತ್ತಾರೆ? ಹೆಚ್ಡಿಕೆ ಪ್ರಶ್ನೆ