ಬೆಂಗಳೂರು: ಮಹಾಮಾರಿ ಕೋವಿಡ್ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ಇದೀಗ ಬೆಂಗಳೂರಲ್ಲಿಯೂ ಒಂದು ಪ್ರಕರಣ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಸೋಂಕು ಪ್ರಕರಣಗಳ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಮಾತ್ರವಲ್ಲದೆ, ತಮಿಳುನಾಡಿನಿಂದ ಇಲ್ಲಿನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರಕ್ಕೆ ಕಳುಹಿಸಿದ ಒಂದು ಸ್ಯಾಂಪಲ್‌ನಲ್ಲಿ ಕೂಡಾ ಡೆಲ್ಟಾ ಪ್ಲಸ್ ರೂಪಾಂತರ ಕಂಡುಬಂದಿದೆ.
ಜೂನ್ 22 ರಂದು ಮೈಸೂರಿನಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ನಿನ್ನೆ ಬೆಂಗಳೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ರೋಗಿ ಯಾವುದೇ ಲಕ್ಷಣರಹಿತವಾಗಿದ್ದು, ಅವರಿಗೆ ಯಾರೂ ಸಂಪರ್ಕಿತರು ಇಲ್ಲದಿರುವುದು ಒಳ್ಳೆಯ ಸಂಕೇತವಾಗಿದೆ ಎಂದು ಡಾ.ಸುಧಾಕರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ರಾಜ್ಯ ರಾಜಧಾನಿಯಲ್ಲೂ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆ- ಆರೋಗ್ಯ ಸಚಿವ ಡಾ.ಸುಧಾಕರ್ - ಕೋವಿಡ್-19 ಡೆಲ್ಟಾ ಪ್ಲಸ್ ವೈರಸ್
ಕೋವಿಡ್‌ನ ಮೂರನೇ ಅಲೆಯ ಭೀತಿ ನಡುವೆಯೂ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸದ್ದು ಮಾಡುತ್ತಿದೆ. ಕೊರೊನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ಬೆಂಗಳೂರಿನಲ್ಲಿ ಒಂದು ಪ್ರಕರಣ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.