ETV Bharat / city

ರಾಜ್ಯ ಬಿಜೆಪಿ ವಿರುದ್ಧ ಹೆಚ್​ಡಿಡಿ ಕಿಡಿ: ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಪ್ರಧಾನಿ - ಹೆಚ್​ ಡಿ ದೇವೇಗೌಡ ಸುದ್ದಿ

ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾಕರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮತ್ತು ಕೈಗಾರಿಕಾ ನೀತಿ ಸೇರಿದಂತೆ ಇತರ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕಾಯ್ದೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ.

deve-gowda-protests-against-bjp-government-amendment
ಮಾಜಿ ಪ್ರಧಾನಿ ದೇವೇಗೌಡ
author img

By

Published : Jul 28, 2020, 3:29 PM IST

ಬೆಂಗಳೂರು: ಭೂ ಸುಧಾಕರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ನೀತಿ ಸೇರಿದಂತೆ ಇತರ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳನ್ನು ಜಾರಿಗೆ ತಂದು ರೈತರು, ಕಾರ್ಮಿಕರನ್ನು ಬೀದಿ ಪಾಲು ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮೂರು ಬಾರಿ ಸಿಎಂಗೆ ಪತ್ರ ಬರೆದಿದ್ದೇನೆ. ಬಹುಮತ ಇದೆ ಎನ್ನುವ ಒಂದೇ ಕಾರಣಕ್ಕೆ ಇಂತಹ ಕಾನೂನು ತರುವುದು ನಿಜಕ್ಕೂ ರಾಜ್ಯದ ಜನತೆಗೆ ಮಾಡುವ ಅನ್ಯಾಯ. ಸರ್ಕಾರ ಈ ತಕ್ಷಣ ಎಚ್ಚೆತ್ತುಕೊಂಡು ಈ ಸುಗ್ರೀವಾಜ್ಞೆಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಸ್ವತಃ ನಾನೇ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ರೈತ ವಿರೋಧಿ ನೀತಿ ಅನುಸರಿಸಲಾಗಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಾಯ್ದೆ ಜಾರಿ ಮೊದಲು ಪ್ರತಿಪಕ್ಷಗಳ ಜೊತೆ ಚರ್ಚೆ ಮಾಡಬೇಕಿತ್ತು. ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961, ಸೆಕ್ಷನ್ 79-ಎ, 79-ಬಿ, 79-ಸಿ ರದ್ದು ಮಾಡಿರುವುದು ರೈತ ವಿರೋಧಿ. ಎಪಿಎಂಸಿ ಕಾಯ್ದೆ ತಿದ್ದುಪಡಿಯೂ ಮಾರಕ. ಕೈಗಾರಿಕೆ ವಿವಾದ ಮತ್ತಿತರ ನಿಯಮಗಳ ತಿದ್ದುಪಡಿ ಮೂಲಕ ಬಿಜೆಪಿ ಸರ್ಕಾರ ರೈತ ವಿರೋಧಿ ತೀರ್ಮಾನ ತೆಗೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೊರೊನಾ ಕಾರಣ ನಾನು ಮಾತನಾಡಲು ಆಗಿಲ್ಲ:

ಸರ್ಕಾರದ ನಿಯಮ ಉಲ್ಲಂಘಿಸಬಾರದು ಅಂತ ಹಿಂದೆ ಸರಿದಿದ್ದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಪರಿಣಾಮ ಏನಾಗಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ನೀಡದೆ ಕಾಯ್ದೆ ಜಾರಿ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲ ಮಾಡಿಕೊಟ್ಟಿದೆ. ಇದರಿಂದ ರೈತರು ಬೀದಿಗೆ ಬೀಳಲಿದ್ದಾರೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈ ಮಾಫಿಯಾ ಹೆಚ್ಚಾಗುತ್ತದೆ. ಅದಕ್ಕಾಗಿ ಸರ್ಕಾರ ದಯಮಾಡಿ ಈ ಎಲ್ಲ ಕಾಯ್ದೆಗಳನ್ನು ರದ್ದುಪಡಿಸಿ ರೈತರ ಪರವಾಗಿ ನಿಲ್ಲಲಿ ಎಂದು ಸಲಹೆ ನೀಡಿದರು.

ಯಾರೋ ಕೈಗಾರಿಕೆಯ ಉದ್ಯಮಿ ಬಂದು ಭೂಮಿ ಪಡೆಯುತ್ತಾನೆ. ಕೈಗಾರಿಕೆ ಉದ್ದೇಶಕ್ಕಾಗಿ ಪಡೆದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಬೇಕು. 7 ವರ್ಷಗಳ ನಂತರ ಅದೇ ಭೂಮಿಯನ್ನು ಪರಭಾರೆ ಮಾಡಬಹುದು. 7 ವರ್ಷಗಳ ನಂತರ ಅಂದಿನ ಬೆಲೆಗೆ ಮಾರಾಟ ಮಾಡುತ್ತಾನೆ. ಬಹುಮತ ಇದೆ ಎನ್ನುವ ಅಹಂನಿಂದ ಇಂತಹ ಕಾನೂನು ತರಲಾಗುತ್ತಿದೆ ಎಂದು ಕಿಡಿಕಾರಿದರು.

ಕೊರೊನಾ ಭ್ರಷ್ಟಾಚಾರ:

ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಎಷ್ಟು ಪ್ಯಾಕೇಜ್ ಬಿಡುಗಡೆ ಮಾಡಿದೆ, ಎಷ್ಟು ಹಣ ಪೋಲಾಗಿದೆ ಎನ್ನುವುದು ಸೇರಿದಂತೆ ಎಲ್ಲವೂ ಜಗಜ್ಜಾಹೀರಾಗಿದೆ. ಕೊರೊನಾ ವೈದ್ಯಕೀಯ ಉಪಕರಣಗಳ ಹಗರಣದಲ್ಲಿ ಎರಡು ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಕೂಡಾ ಆರೋಪ ಮಾಡಿದೆ. ಇದರ ಬಗ್ಗೆ ಹೋರಾಟ ಮಾಡಬೇಕೋ, ಬೇಡವೋ ಗೊತ್ತಾಗುತ್ತಿಲ್ಲ. ಯಾರು ಭ್ರಷ್ಟಾಚಾರ ಮಾಡಿರುತ್ತಾರೋ ಅವರಿಗೇ ಮತ್ತೆ ಶಕ್ತಿ ಬರುತ್ತದೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿವೆ. ಹಾಗಂತ ನಾನು ಸುಮ್ಮನೆ ಕುಳಿತುಕೊಳ್ಳುತ್ತೇನೆ ಅಂತಾ ಅಲ್ಲ. ಹೀಗೆ ಜನಸಾಮಾನ್ಯರ ವಿಚಾರದಲ್ಲಿ ಆಟವಾಡಿದರೆ ನಾನು ಸುಮ್ಮನೆ ಕೂರುವುದಿಲ್ಲ‌. ಈಗಲಾದರೂ ಕೊರೊನಾ ವಿಚಾರದಲ್ಲಿ ಎಚ್ಚೆತ್ತುಕೊಂಡು ಕೆಲಸ ಮಾಡಲಿ ಎಂದು ದೇವೇಗೌಡರು ಆಗ್ರಹಿಸಿದರು.

ಬಿಜೆಪಿ ಬಗ್ಗೆ ಸಾಫ್ಟ್​​ ಕಾರ್ನರ್​​ ಇಲ್ಲ:

ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಈ ಸರ್ಕಾರ ಬರುವುದಕ್ಕೆ ಯಾರು ಕಾರಣ ಎಂಬುದು ಜನತೆಗೆ ಗೊತ್ತಿದೆ. ಇದರ ಬಗ್ಗೆ ಮಾತಾಡೋಕೆ ಹೋಗಲ್ಲ. ಎಷ್ಟು ದಿನಾ ಅಂತಾ ಸುಮ್ಮನೆ ಮಾತನಾಡುತ್ತಾ ಹೋಗೋದು. ನಮ್ಮ ಪಕ್ಷವನ್ನು ಉಳಿಸೋದು ನಮ್ಮ ಗುರಿ. ಅಧಿಕಾರಕ್ಕೆ ಬರ್ತೇವೋ, ಇಲ್ಲವೋ, ಪ್ರತಿಪಕ್ಷದಲ್ಲಿ ಇರ್ತೇವೊ ಗೊತ್ತಿಲ್ಲ. ಅದನ್ನು ಜನ ತೀರ್ಮಾನ ಮಾಡಬೇಕು.
ಹಾಗಂತ ನಮ್ಮ ಜನತೆಗೆ ತೊಂದರೆ ಆದರೆ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ ಎಂದು ದೇವೇಗೌಡರು ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ರವಾನಿದರು.

ಮೋದಿ ಹೇಳಿದ್ದೇ ವೇದವಾಕ್ಯ:

ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಹೇಳಿದ್ದೇ ವೇದವಾಕ್ಯ. ಇವರು ಪ್ರತಿಪಕ್ಷಗಳ ವಿಶ್ವಾಸ ಪಡೆಯುತ್ತಿಲ್ಲ. ನಾನು ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ದಲ್ಲಾಳಿಗೆ ಪೂರ್ಣ ಅವಕಾಶ ನೀಡಿದಂತಾಗಿದೆ. ಕಾಂಗ್ರೆಸ್, ಸಿಪಿಐಎಂ ಸೇರಿ ಅನೇಕರು ಇದನ್ನು ವಿರೋಧಿಸಿದ್ದಾರೆ. ಈ ಕುರಿತು ರಾಜ್ಯಾದ್ಯಂತ ಹೋರಾಟ ಮಾಡಬೇಕು. ಆದರೆ, ಕೊರೊನಾದಿಂದಾಗಿ ಹಿನ್ನಡೆಯಾಗಿದೆ ಎಂದರು.

ರಾಜ್ಯ ರೈತರ ಜೊತೆ ಸಂವಾದ:

ಈ ವಿಚಾರವನ್ನು ನಾವು ಕೊನೆ ಹಂತದವರೆಗೂ ತೆಗೆದುಕೊಂಡು ಹೋಗುತ್ತೇನೆ. ಆಗಸ್ಟ್ 1 ರಿಂದ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪ್ರತಿ ತಾಲೂಕಿನ ಒಬ್ಬೊಬ್ಬ ರೈತರ ಜೊತೆ ಸಭೆ ಮಾಡುತ್ತೇವೆ. ನಮ್ಮ ಮುಂದಿನ ಹೋರಾಟಕ್ಕೆ ರೂಪುರೇಷೆ ರೂಪಿಸುತ್ತೇವೆ ಎಂದರು.

ಈ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ. ಅವಕಾಶ ಸಿಕ್ಕರೆ ಒಂದಿಬ್ಬರು ರೈತರನ್ನು ಕರೆದುಕೊಂಡು ಹೋಗಿ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ಮತ್ತೆ ಯಾವಾಗ ಅಧಿವೇಶನ ಕರೆಯುತ್ತಾರೋ ಗೊತ್ತಿಲ್ಲ. ಆದರೆ, ಅಲ್ಲಿಯವರೆಗೆ ಈ ಕಾಯ್ದೆಯ ಕುರಿತು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ. ರೈತರಿಗೆ, ಕಾರ್ಮಿಕರಿಗೆ ಮಾರಕವಾಗಿರುವ ಈ ಕಾಯ್ದೆಯನ್ನು ಹಿಂಪಡೆಯುವವರೆಗೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ದೇವೇಗೌಡರು ಹೇಳಿದರು.

ರಾಜಸ್ಥಾನ ಬಿಕ್ಕಟ್ಟು ಕುರಿತು ಅಸಮಾಧಾನ:

ಮಧ್ಯೆ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆದಿದ್ದು ಯಾರು?. ರಾಜಾಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುತ್ತಿರುವುದು ಯಾರು?. ಎರಡೂ ರಾಷ್ಟ್ರೀಯ ಪಕ್ಷಗಳು ಜನತೆಯ ತೀರ್ಪು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಕೇವಲ ಅಧಿಕಾರ ಹಿಡಿಯುವುದೇ ಇವರಿಗೆ ಮುಖ್ಯ ಆಗಿದೆ ಎಂದು ಹೆಚ್​ಡಿಡಿ ಬೇಸರ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.