ಬೆಂಗಳೂರು: ಕಳೆದ ಎರಡು ದಿನಗಳಿಂದ ಬಸ್ ಡಿಪೋಗಳಲ್ಲಿ ಡೀಸೆಲ್ ಕೊರತೆ ಎದುರಾಗಿದೆ. ಆದ್ದರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ.
ಕಳೆದ ಎರಡು ದಿನಗಳಿಂದ ಡಿಪೋಗಳಲ್ಲಿ ಡೀಸೆಲ್ ಕೊರತೆ ಕಂಡು ಬಂದಿದೆ. ಆದರೆ ಇಂದು ಬಹುತೇಕ ಡಿಪೋಗಳಲ್ಲಿ ಡೀಸೆಲ್ ಖಾಲಿ ಆಗುವ ಸಾಧ್ಯತೆ ಇದೆ. ಸಗಟು ಖರೀದಿ ದರದಿಂದ ತತ್ತರಿಸಿ ಹೋಗಿದ್ದೇವೆ. ಸದ್ಯಕ್ಕೆ ಚಿಲ್ಲರೆ ವ್ಯಾಪಾರಿಗಳಿಂದ ನಿಗಮ ಡೀಸೆಲ್ ಖರೀದಿಸುತ್ತಿದೆ ಎಂದು ಹೆಸರು ಹೇಳಲಿಚ್ಛಿಸದ ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಓದಿ: ಬಿಎಂಟಿಸಿ ಫೀಡರ್ ಬಸ್ನಿಂದ ಬರುತ್ತಿಲ್ಲ ಆದಾಯ
ಮೂರು ದಿನಗಳಿಂದ ಚಿಲ್ಲರೆ ವ್ಯಾಪಾರಿಗಳಿಂದಲೂ ಡೀಸೆಲ್ ಪೂರೈಕೆ ಆಗುತ್ತಿಲ್ಲ. ಹೀಗಾಗಿ ಬಿಎಂಟಿಸಿ ಡಿಪೋಗಳಲ್ಲಿ ಭಾರಿ ಪ್ರಮಾಣದ ಡೀಸೆಲ್ ಕೊರತೆ ಎದುರಾಗಿದ್ದು, ಬಿಎಂಟಿಸಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದಿದ್ದಾರೆ.