ETV Bharat / city

ಅನುದಾನ ಹಂಚಿಕೆಯಲ್ಲಿ ತಾರತಮ್ಯ.. ಸಿಎಂ ಕಚೇರಿ ಮುಂದೆ ಧರಣಿ.. ಮಾಜಿ ಸಚಿವ ರಾಮಲಿಂಗಾರೆಡ್ಡಿ - ಅನುದಾನ ಹಂಚಿಕೆ ಕುರಿತು ಸರ್ಕಾರದ ವಿರುದ್ಧ ರಾಮಲಿಂಗಾರೆಡ್ಡಿ ಆಕ್ರೋಶ

ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಾನು ಹಾಗೂ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಪ್ರತಿಭಟನೆ ಮಾಡ್ತೇವೆ. ಸೋಮವಾರ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಆಗಲೂ ಸಮಸ್ಯೆ ಬಗೆಹರಿಸಿಲ್ಲವಾದರೆ, ಬುಧವಾರದಂದು ಸಿಎಂ ಮನೆ ಮುಂದೆ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು..

ramalingareddy
ರಾಮಲಿಂಗಾರೆಡ್ಡಿ
author img

By

Published : Jan 7, 2022, 3:00 PM IST

ಬೆಂಗಳೂರು : ಬಿಟಿಎಂ ಹಾಗೂ ಜಯನಗರ ಕ್ಷೇತ್ರಕ್ಕೆ ನಯಾಪೈಸೆ ಅನುದಾನ ಬಿಡುಗಡೆ ಮಾಡದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಎಂ ಕಚೇರಿ ಮುಂದೆ ಬುಧವಾರ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದೆ. ಒಂದೊಂದು ರೀತಿ ಅನುದಾನ ಕೊಟ್ಟಿದ್ದಾರೆ.

9 ಕಾಂಗ್ರೆಸ್ ಶಾಸಕರಿಗೆ 248 ಕೋಟಿ ರೂ. ಕೊಟ್ಟಿದ್ದರೆ, 15 ಬಿಜೆಪಿ ಶಾಸಕರಿಗೆ 1100 ಕೋಟಿ ರೂ. ಹಾಗೂ ಒಬ್ಬ ಜೆಡಿಎಸ್ ಶಾಸಕರಿಗೆ 125 ಕೋಟಿ ರೂ. ಕೊಡಲಾಗಿದೆ. ಆದರೆ, ಬಿಟಿಎಂ ಹಾಗೂ ಜಯನಗರ ಕ್ಷೇತ್ರಕ್ಕೆ ನಯಾ ಪೈಸೆ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಈ ಸಂಬಂಧ ಪಾಲಿಕೆ ಮುಖ್ಯ ಆಯುಕ್ತ ಹಾಗೂ ಆಡಳಿತಾಧಿಕಾರಿಯನ್ನು ಭೇಟಿ ನೀಡಿ ಮಾತನಾಡಿದ್ದೇನೆ. ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಾನು ಹಾಗೂ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಪ್ರತಿಭಟನೆ ಮಾಡ್ತೇವೆ. ಸೋಮವಾರ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಆಗಲೂ ಸಮಸ್ಯೆ ಬಗೆಹರಿಸಿಲ್ಲವಾದರೆ, ಬುಧವಾರದಂದು ಸಿಎಂ ಮನೆ ಮುಂದೆ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಕ್ಷೇತ್ರದಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿದೆ

ಮಳೆ ಬಿದ್ದಾಗ ಸಿಎಂ ಸಿಟಿ ರೌಂಡ್ಸ್ ಮಾಡಿದ್ದರು. ಮಳೆ ಬಂದರೆ 100 ಕಡೆ ನೀರು ನಿಲ್ಲುತ್ತದೆ. ಅಪಾರ್ಟ್​ಮೆಂಟ್​ಗಳಿಗೆ ನೀರು ನುಗ್ಗಿತ್ತು. 1500 ಕೋಟಿ ರೂ. ಬಿಡುಗಡೆ ಮಾಡ್ತೇವೆ ಅಂದ್ರು. ಬೆಂಗಳೂರು ಅಭಿವೃದ್ಧಿಗೆ ಹಣ ಬಿಡುಗಡೆ ಮಾಡ್ತೇವೆ ಎಂದಿದ್ದರು. ಸಿಎಂಗೆ ಬರೀ ಬಿಜೆಪಿ ಶಾಸಕರು ಮಾತ್ರ ಕಾಣ್ತಾರೆ.

ಅವರ ಕ್ಷೇತ್ರಗಳಿಗೆ ಮಾತ್ರ ಅನುದಾನ ಕೊಡ್ತಾರೆ. ನನ್ನ ಕ್ಷೇತ್ರದ ಸಮಸ್ಯೆ ಬಗ್ಗೆ ಪತ್ರ ಬರೆದಿದ್ದೆ. ಈಗ 1500 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. 298 ಕಾಮಗಾರಿಗಳಿಗೆ ಅವಕಾಶ ಕೊಟ್ಟಿದ್ದಾರೆ. 1479 ಕೋಟಿಯಷ್ಟು ಕೆಲಸ ನೀಡಿದ್ದಾರೆ. ಅದರಲ್ಲೂ ತಾರತಮ್ಯ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಟಿಎಂ, ಜಯನಗರಕ್ಕೆ ಒಂದು ಪೈಸೆ ಕೊಟ್ಟಿಲ್ಲ. ನಮ್ಮ ಕ್ಷೇತ್ರಗಳಲ್ಲಿನ ಜನರ ಮನೆಗೆ ಮಳೆ ನೀರು ನುಗ್ಗಿಲ್ವಾ?, ರಸ್ತೆ, ಬ್ರಿಡ್ಜ್ ಹಾಳಾಗಿಲ್ವಾ. ಯಾಕೆ ಈ ತಾರತಮ್ಯ ಮಾಡೋದು?. ಇನ್ನು ಒಂದೂವರೆ ವರ್ಷ ಬಳಿಕ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆಗ ನಾವು ಇದೇ ರೀತಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಬೇಕಾಗುತ್ತದೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪಂಜಾಬ್ ಸರ್ಕಾರ ವಜಾಗೊಳಿಸಿ : ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಕಟೀಲ್ ಮನವಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.