ETV Bharat / city

ನೆರೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು ನಿಯಮ 68ರ ಅಡಿ ಚರ್ಚೆಗೆ ಅವಕಾಶ ಕೊಟ್ಟ ಸಭಾಪತಿ

ರಾಜ್ಯದಲ್ಲಿ ಸಂಭವಿಸಿದ ನೆರೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು 59ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ನಿಲುವಳಿ ಸೂಚನೆ ಮಂಡಿಸಿದರು. 55 ಲಕ್ಷ ಎಕರೆ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾಗಿ ಪರಿಹಾರ ಸಿಗದೆ ಕಂಗಾಲಾಗಿದ್ದಾರೆ ಎಂದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

ಸಭಾಪತಿ ರೂಲಿಂಗ್
ಸಭಾಪತಿ ರೂಲಿಂಗ್
author img

By

Published : Dec 7, 2020, 9:56 PM IST

ಬೆಂಗಳೂರು: ರಾಜ್ಯದಲ್ಲಿ ನೆರೆಹಾನಿಯಿಂದಾಗಿರುವ ಸಮಸ್ಯೆಗಳು, ಸರ್ಕಾರದ ಪರಿಹಾರ ಕಾರ್ಯಾಚರಣೆ ಕುರಿತು ನಿಯಮ 68ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರೂಲಿಂಗ್ ನೀಡಿದರು.

ರಾಜ್ಯದಲ್ಲಿ ಸಂಭವಿಸಿದ ನೆರೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು 59ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ನಿಲುವಳಿ ಸೂಚನೆ ಮಂಡಿಸಿದರು. 55 ಲಕ್ಷ ಎಕರೆ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾಗಿ ಪರಿಹಾರ ಸಿಗದೆ ಕಂಗಾಲಾಗಿದ್ದಾರೆ ಎಂದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಪ್ರಶ್ನೋತ್ತರ ಕಲಾಪದ‌ ನಂತರ ನಿಲುವಳಿ ಕೈಗೆತ್ತಿಕೊಳ್ಳಬೇಕು. ನಾವೇ ನಿಯಮ ಮಾಡಿಕೊಂಡಿದ್ದೇವೆ, ಇದರ ಉಲ್ಲಂಘನೆ ಬೇಡ ಎಂದರು. ಇದಕ್ಕೆ ಟಾಂಗ್ ನೀಡಿದ ಎಸ್.ಆರ್.ಪಾಟೀಲ್, ಬಿಸಿಎ ಸಭೆಯಲ್ಲಿ ನಿರ್ಧಾರ ಆಗಿದೆ, ಆರಂಭದಲ್ಲೇ ಐದು ನಿಮಿಷ ಮಾತನಾಡಲು ಅವಕಾಶ ನೀಡಲಾಗುತ್ತದೆ. ನಂತರ ಪ್ರಶ್ನೋತ್ತರ, ಶೂನ್ಯ ವೇಳೆ ಮಾಡಿ ಬಳಿಕ ನಿಯಮ ಪರಿವರ್ತಿಸಿಯೋ ಇಲ್ಲದೆಯೋ ಚರ್ಚೆಗೆ ಅವಕಾಶ ನೀಡಲಾಗುತ್ತದೆ ಎಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಪರಸ್ಪರ ವಿಷಯ ಪ್ರಸ್ತಾಪಿಸಿ ವಾಕ್ಸಮರ ನಡೆಸಲಾಯಿತು.

ಅಂತಿಮವಾಗಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮಧ್ಯಪ್ರವೇಶ ಮಾಡಿ ಪ್ರಶ್ನೋತ್ತರಕ್ಕೂ ಮೊದಲು ನಿಲುವಳಿ ಸೂಚನೆ ಚರ್ಚೆಗೆ ಅವಕಾಶ ನೀಡಲು ಬರುವುದಿಲ್ಲ.‌ ಆದರೆ ಮಂಡಿಸಿ ಐದು ನಿಮಿಷ ಮಾತನಾಡಬಹುದು ಎಂದು ಅವಕಾಶ ನೀಡಿದರು.

ಬಳಿಕ ನಿಲುವಳಿ ಸೂಚನೆ ಮಂಡಿಸಿ ಮಾತನಾಡಿದ ಎಸ್.ಆರ್.ಪಾಟೀಲ್, ರಾಜ್ಯದ 22 ಜಿಲ್ಲೆಗಳ 180 ತಾಲೂಕುಗಳು ಪ್ರವಾಹದಿಂದ ಮುಳುಗಿ ಹೋಗಿವೆ. 55 ಲಕ್ಷ ಎಕರೆ ಬೆಳೆ ಕೊಚ್ಚಿಕೊಂಡು ಹೋಗಿ ರೈತರು ಕಂಗಾಲಾಗಿದ್ದಾರೆ. 90 ಜನ ಮೃತಪಟ್ಟಿದ್ದು, ಎರಡು ಸಾವಿರ ಜಾನುವಾರುಗಳು ಮೃತಪಟ್ಟಿವೆ. 60 ಸಾವಿರ ಕೋಟಿ ರೂ.ನಷ್ಟು ಹಾನಿಯಾಗಿದೆ. ಇಷ್ಟಾದರೂ ಸರ್ಕಾರ ಪರಿಹಾರವನ್ನು ಸರಿಯಾಗಿ ಕೊಟ್ಟಿಲ್ಲ. ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಸರ್ಕಾರದ ಗಮನಕ್ಕೆ ಇದನ್ನು ತರುತ್ತಿದ್ದು, ನಿಯಮ 59ರ ಅಡಿ ಚರ್ಚೆಗೆ ಅನುಮತಿ ಕೊಡುವಂತೆ ಮನವಿ ಮಾಡಿದರು.

ಪ್ರತಿಪಕ್ಷ ನಾಯಕರು ಮಂಡಿಸಿದ ನಿಲುವಳಿ ಸೂಚನೆಯನ್ನು ನಿಯಮ 68ರ ಅಡಿ ಚರ್ಚೆಗೆ ತೆಗೆದುಕೊಳ್ಳುವ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ರೂಲಿಂಗ್ ನೀಡಿದರು.

ಈ ವೇಳೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಪ್ರಸ್ತಾಪಿಸಿದ ಅಂಶಗಳಿಗೆ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಪರಿಹಾರ ಕ್ರಮದ ವಿವರ ನೀಡಲು ಸಿದ್ಧ ಎಂದರು. ಪ್ರಶ್ನೋತ್ತರ ಕಲಾಪಕ್ಕೂ ಮುನ್ನವೇ ಸರ್ಕಾರದ ಸಮರ್ಥನೆಗೆ ನಿಂತರು. ಪರಿಹಾರ ವಿತರಣೆಯಲ್ಲಿ ರಾಜಕೀಯ ಮಾಡಿಲ್ಲ, ಅರ್ಹರಿಗೆ ಪರಿಹಾರ ನೀಡಲಾಗಿದೆ, ಅದರ ಪಟ್ಟಿ ಕೊಡಲು ಸಿದ್ಧನಿದ್ದೇನೆ ಎಂದರು.

ಇದಕ್ಕೆ ಪ್ರತಿಪಕ್ಷ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಚರ್ಚೆ ನಂತರ ಉತ್ತರಿಸಬೇಕು. ಆದರೆ ಪ್ರಸ್ತಾಪಕ್ಕೆ ಉತ್ತರ ಹೇಳಲು ಹೊರಟಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್-ಬಿಜೆಪಿ ಉಭಯ ಪಕ್ಷಗಳ ಸದಸ್ಯರ ನಡುವೆ ವಾದ ಪ್ರತಿವಾದ ನಡೆಯಿತು. ಗದ್ದಲ ಗಲಾಟೆ ನಡುವೆ ಪ್ರಶ್ನೋತ್ತರ ಕಲಾಪ ಆರಂಭಿಸುವ ಮೂಲಕ ಸಭಾಪತಿಗಳು ಸದನದಲ್ಲಿ ಗದ್ದಲದ ವಾತಾವರಣವನ್ನು ತಿಳಿಗೊಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.