ETV Bharat / city

ಸಕಾಲ ಯೋಜನೆಯಡಿ 20 ಕೋಟಿಗೂ ಹೆಚ್ಚು ಅರ್ಜಿಗಳ ವಿಲೇವಾರಿ: ಸುರೇಶ್‍ಕುಮಾರ್

ಸಕಾಲ ಯೋಜನೆಯಡಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಸುಮಾರು 20 ಕೋಟಿಗೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾರ್ಮಿಕ ಹಾಗೂ ಸಕಾಲ ಸಚಿವ ಎಸ್. ಸುರೇಶ್​ ಕುಮಾರ್ ತಿಳಿಸಿದರು.

author img

By

Published : Oct 28, 2019, 10:54 PM IST

ಸುರೇಶ್‍ಕುಮಾರ್

ಬೆಂಗಳೂರು: ಸಕಾಲ ಯೋಜನೆಯಡಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಸುಮಾರು 20 ಕೋಟಿಗೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಚಿವ ಎಸ್. ಸುರೇಶ್​ ಕುಮಾರ್ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸೆಪ್ಟೆಂಬರ್ ತಿಂಗಳ ಸಕಾಲ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಇದುವರೆಗೆ ಸಕಾಲ ಯೋಜನೆಯಡಿ 20,09,94,713 ಅರ್ಜಿಗಳನ್ನು ಸ್ವೀಕರಿಸಿದ್ದು, ಆ ಪೈಕಿ 20,02,84,447 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 25,76,030 ಅರ್ಜಿಗಳನ್ನು ಸ್ವೀಕರಿಸಿದ್ದು, ಆ ಪೈಕಿ 25,03,582 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಶೇ. 97.18ರಷ್ಟು ಗುರಿ ಸಾಧಿಸಲಾಗಿದೆ. ಸೆಪ್ಟೆಂಬರ್ ತಿಂಗಳ ಸಕಾಲ ಯೋಜನೆಯ ಮೌಲ್ಯಮಾಪನ ಮಾಡಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಹಾಸನ ಜಿಲ್ಲೆ ದ್ವಿತೀಯ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ತೃತೀಯ ಸ್ಥಾನ ಪಡೆದಿವೆ ಎಂದರು.

ಕಳಪೆ ಸಾಧನೆ ಮಾಡಿದ ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆ 30ನೇ ಸ್ಥಾನ, ಬಾಗಲಕೋಟೆ ಜಿಲ್ಲೆ 29ನೇ ಸ್ಥಾನ ಹಾಗೂ ಬೀದರ್ ಜಿಲ್ಲೆ 28ನೇ ಸ್ಥಾನ ಪಡೆದಿವೆ ಎಂದು ಸಚಿವರು ತಿಳಿಸಿದರು. ಸಕಾಲ ಯೋಜನೆಯಡಿ ಕಾಲ್‍ ಸೆಂಟರ್ ತೆರೆಯಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ 60 ಸಾವಿರ ಕರೆಗಳನ್ನು ಸ್ವೀಕರಿಸಲಾಗಿದೆ. ಆನ್‍ಲೈನ್ ಮೂಲಕ ಸೇವೆಗಳನ್ನು ಒದಗಿಸುವ "ಸೇವಾ ಸಿಂಧು" ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ರಾಜ್ಯದಲ್ಲಿ ಸುಮಾರು 8 ಸಾವಿರ ಕೇಂದ್ರಗಳನ್ನು ತೆರೆಯಲಾಗಿದೆ. ಜನರ ಮನೆ ಬಾಗಿಲಿಗೆ ಹೋಗಿ ಸೇವೆ ಒದಗಿಸುವ "ಜನ ಸೇವಕ" ಕಾರ್ಯಕ್ರಮವನ್ನು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ವೃದ್ಧರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ತಿಳಿಸಿದರು.

ಇನ್ನು ಸಕಾಲ ಯೋಜನೆಯಡಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯಮಟ್ಟದ ಉತ್ತಮ ಅಧಿಕಾರಿಯೊಬ್ಬರಿಗೆ ಪ್ರಮಾಣ ಪತ್ರದ ಜೊತೆ 50 ಸಾವಿರ ರೂ. ಪ್ರೋತ್ಸಾಹ ಧನ ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಯೊಬ್ಬರಿಗೆ 10 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದರು. ಈ ವೇಳೆ ಪ್ರಥಮ ಸ್ಥಾನ ಪಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಲತಾ ಅವರಿಗೆ ಪ್ರಶಂಸನಾ ಪತ್ರವನ್ನು ನೀಡಿದರು.

Intro:newsBody:ಸಕಾಲ ಯೋಜನೆಯಡಿ 20 ಕೋಟಿಗೂ ಹೆಚ್ಚು ಅರ್ಜಿಗಳ ವಿಲೇವಾರಿ: ಸುರೇಶ್‍ಕುಮಾರ್

 ಬೆಂಗಳೂರು: ಸಕಾಲ ಯೋಜನೆಯಡಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಸುಮಾರು 20 ಕೋಟಿಗೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾರ್ಮಿಕ ಹಾಗೂ ಸಕಾಲ ಸಚಿವ ಎಸ್. ಸುರೇಶ್‍ಕುಮಾರ್ ಅವರು ತಿಳಿಸಿದರು.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸೆಪ್ಟೆಂಬರ್ ತಿಂಗಳ ಸಕಾಲ ವರದಿ ಬಿಡುಗಡೆ ಮಾಡಿ ಮಾತನಾಡಿ, ಇದುವರೆಗೆ ಸಕಾಲ ಯೋಜನೆಯಡಿ 20,09,94,713 ಅರ್ಜಿಗಳನ್ನು ಸ್ವೀಕರಿಸಿದ್ದು ಆ ಪೈಕಿ 20,02,84,447 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ ತಿಂಗಳಲ್ಲಿ 25,76,030 ಅರ್ಜಿಗಳನ್ನು ಸ್ವೀಕರಿಸಿದ್ದು ಆ ಪೈಕಿ 25,03,582 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು ಸೆಪ್ಟೆಂಬರ್ ತಿಂಗಳಲ್ಲಿ ಶೇ. 97.18 ರಷ್ಟು ಗುರಿಸಾಧಿಸಲಾಗಿದೆ. ಸೆಪ್ಟೆಂಬರ್ ತಿಂಗಳ ಸಕಾಲ ಯೋಜನೆಯ ಮೌಲ್ಯಮಾಪನ ಮಾಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಹಾಸನ ಜಿಲ್ಲೆ ದ್ವಿತೀಯ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ತೃತೀಯ ಸ್ಥಾನ ಪಡೆದಿವೆ.  ಕಳಪೆ ಸಾಧನೆ ಮಾಡಿದ ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆ 30 ನೇ ಸ್ಥಾನವನ್ನು,   ಬಾಗಲಕೋಟೆ  ಜಿಲ್ಲೆ 29 ನೇ ಸ್ಥಾನವನ್ನು ಹಾಗೂ ಬೀದರ್ ಜಿಲ್ಲೆ 28 ನೇ ಸ್ಥಾನವನ್ನು ಪಡೆದಿವೆ ಎಂದು ಸಚಿವರು ತಿಳಿಸಿದರು.
ಸಕಾಲ ಯೋಜನೆಯಡಿ ಕಾಲ್‍ಸೆಂಟರ್ ತೆರೆಯಲಾಗಿದ್ದು ಸೆಪ್ಟೆಂಬರ್ ತಿಂಗಳಲ್ಲಿ 60 ಸಾವಿರ ಕರೆಗಳನ್ನು ಸ್ವೀಕಾರ ಮಾಡಿದ್ದು ಅತಿ ಹೆಚ್ಚು ಕರೆಗಳು ಅಂದರೆ 16,327 ಕರೆಗಳನ್ನು ಬೆಂಗಳೂರಿನಿಂದ ಸ್ವೀಕರಿಸಲಾಗಿದೆ. ಆನ್‍ಲೈನ್ ಮೂಲಕ ಸೇವೆಗಳನ್ನು ಒದಗಿಸುವ "ಸೇವಾ ಸಿಂಧು" ಯೋಜನೆಯನ್ನು ಪ್ರಾರಂಭಿಸಲಾಗಿದ್ದು ರಾಜ್ಯದಲ್ಲಿ ಸುಮಾರು 8 ಸಾವಿರ  ಕೇಂದ್ರಗಳನ್ನು ತೆರೆಯಲಾಗಿದೆ. ಜನರ ಮನೆಬಾಗಿಲಿಗೆ  ಹೋಗಿ ಸೇವೆ ಒದಗಿಸುವ "ಜನಸೇವಕ" ಕಾರ್ಯಕ್ರಮವನ್ನು ನಗರದ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ  ಆರಂಭಿಸಲಾಗಿದ್ದು ವೃದ್ಧರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ತಿಳಿಸಿದರು.
ಅಧಿಕಾರಿಗೆ ಸಮ್ಮಾನ
ಸಕಾಲ ಯೋಜನೆಯಡಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ  ರಾಜ್ಯಮಟ್ಟದ ಉತ್ತಮ ಅಧಿಕಾರಿಯೊಬ್ಬರಿಗೆ ಪ್ರಮಾಣ ಪತ್ರದ  ಜೊತೆ 50 ಸಾವಿರ ರೂ. ಪ್ರೋತ್ಸಾಹಧನ ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಯೊಬ್ಬರಿಗೆ 10 ಸಾವಿರ ರೂ. ಬಹುಮಾನ ನೀಡಲಾಗುವುದು. ಸಕಾಲ ಯೋಜನೆ ರಾಜ್ಯದ ಮಹಾತ್ವಾಕಾಂಕ್ಷೆ ಯೋಜನೆಯಾಗಿದ್ದು ಕೇಂದ್ರ ಸರ್ಕಾರವು ರಾಜ್ಯದಿಂದ ಮಾಹಿತಿ ಪಡೆದಿದ್ದು ದೇಶಾದ್ಯಂತ್ಯ ಈ ಯೋಜನೆ ಜಾರಿಗೆ ತರಲು  ಕೇಂದ್ರ ಸರ್ಕಾರ ಬಯಸಿದೆ  ಎಂದು  ಅಭಿಪ್ರಾಯಪಟ್ಟ  ಸಚಿವರು ಸಕಾಲದಲ್ಲಿ ಪ್ರಥಮಸ್ಥಾನ ಪಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಲತಾ ಅವರಿಗೆ ಪ್ರಶಂಸನಾ ಪತ್ರವನ್ನು ನೀಡಿದರು.
ಈ ಸಂಧರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ. ಎಂ. ವಿಜಯಭಾಸ್ಕರ್, ಇ-ಆಡಳಿತದ ಹೆಚ್ಚುವರಿ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಅವರು ಸೇರಿದಂತೆ ಸಕಾಲ ಯೋಜನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.