ETV Bharat / city

ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅನುಕೂಲ ರಾಜಕಾರಣಿಗಳು: ಸಿ.ಪಿ.ಯೋಗೇಶ್ವರ್ ಟೀಕೆ

ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಅನುಕೂಲ ರಾಜಕಾರಣಿಗಳು. ಇಷ್ಟು ದಿನ ಅವರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್​ನ ನೂತನ ಸದಸ್ಯ ಸಿ.ಪಿ.ಯೋಗೇಶ್ವರ್ ಟೀಕಿಸಿದ್ದಾರೆ.

CP Yogeshwar
ಸಿ.ಪಿ ಯೋಗೇಶ್ವರ್
author img

By

Published : Jul 30, 2020, 2:29 PM IST

Updated : Jul 30, 2020, 2:42 PM IST

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.‌ಶಿವಕುಮಾರ್ ಅನುಕೂಲಕ್ಕೆ ತಕ್ಕಂತೆ ರಾಜಕಾರಣ ಮಾಡುತ್ತಾರೆ ಎಂದು ವಿಧಾನಪರಿಷತ್​ನ ನೂತನ ಸದಸ್ಯ, ನಟ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮೂಲ ಕ್ಷೇತ್ರ ರಾಮನಗರಕ್ಕೆ ಡಿಕೆಶಿ ಕೈ ಹಾಕಿದ್ದಾರೆ. ಹೀಗಾಗಿ ಕುಮಾರಸ್ವಾಮಿ, ಡಿಕೆಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಅನುಕೂಲ ರಾಜಕಾರಣಿಗಳು. ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ ಎಂದರು.

ಸಿ.ಪಿ.ಯೋಗೇಶ್ವರ್ ಟೀಕೆ

ಕುಮಾರಸ್ವಾಮಿಗೆ ಈಗ ಅಸ್ತಿತ್ವದ ಪ್ರಶ್ನೆಯಾಗಿರುವುದರಿಂದ ಮಾತನಾಡುತ್ತಿದ್ದಾರೆ. ಅವರ ಮಾತುಗಳನ್ನು ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆ ಅಂತ ಕಾಣಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಕುಮಾರಸ್ವಾಮಿ ಹೇಳಿರುವ ಎಲ್ಲ ಕೆಲಸಗಳೂ ಆಗುತ್ತಿವೆ. ಅವರು ಹೇಳಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಡಲಾಗುತ್ತಿದೆ. ಹೀಗಾಗಿ ಅವರೂ ಬಿಜೆಪಿಗೆ ಸಪೋರ್ಟ್ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ಡಿ. ಕೆ. ಶಿವಕುಮಾರ್ ಹಗಲು ಹೊತ್ತಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಾರೆ. ರಾತ್ರಿಯಾದರೆ ನಮ್ಮ ಮುಖ್ಯಮಂತ್ರಿ ಬಳಿ ಬಂದು ಕೆಲಸ ಮಾಡಿಸಿಕೊಳ್ಳುತ್ತಾರೆ. ಇಬ್ಬರೂ ಸಹ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಬಯಸುತ್ತಾರೆ. ಇಬ್ಬರೂ ನಾಯಕರು ಸಂದರ್ಭಕ್ಕೆ ತಕ್ಕಂತೆ, ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಅವರನ್ನು ನಂಬಿ ಕಾರ್ಯಕರ್ತರು ಹಾಳಾಗುತ್ತಿದ್ದಾರೆ. ಅದಕ್ಕೆ ಬಿಜೆಪಿ ಸೇರುವಂತೆ ಬಹಿರಂಗವಾಗಿ ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದರು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಗೊಳಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಸೇರಲು ಆಹ್ವಾನ ನೀಡುತ್ತೇನೆ ಎಂದರು.

'ಅಸಮಾಧಾನವಿಲ್ಲ...'

ನನ್ನ ಆಯ್ಕೆ ಮಾಡುವಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಪಕ್ಷ ಹಾಗೂ ಯಡಿಯೂರಪ್ಪ ಎಲ್ಲರೂ ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ. ನನ್ನನ್ನು ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿರುವುದು ಪುಣ್ಯ, ಸಂಪುಟಕ್ಕೆ ಸೇರಿಸಿಕೊಳ್ಳುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ಮಾರ್ಮಿಕವಾಗಿ ನುಡಿದರು.

Last Updated : Jul 30, 2020, 2:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.