ETV Bharat / city

ನಮ್ಮನ್ನು ನೂರು ಬಾರಿ ಜೈಲಿಗೆ ಕಳುಹಿಸಿದರೂ ನಾವು ಹೆದರುವುದಿಲ್ಲ : ಡಿಕೆಶಿ

ಆರೋಗ್ಯ ಸಚಿವ ಸುಧಾಕರ್ ಅವರು ಕೊರೊನಾ ಹಿನ್ನೆಲೆ ಪಾದಯಾತ್ರೆ ನಿಲ್ಲಿಸಲು ಮನವಿ ಮಾಡುತ್ತೇನೆ ಎಂದು ನೀಡಿರುವ ಹೇಳಿಕೆಗೆ ಉತ್ತರಿಸಿದ ಡಿಕೆಶಿ ಅವರು, ಬಹಳ ಸಂತೋಷ. ಅವರು ತಮಗೆ ಸಿಕ್ಕಿರುವ ಜವಾಬ್ದಾರಿ ಬಳಸಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ವಸೂಲಿ ಮಾಡಿಕೊಂಡು ಬರಲಿ. ಜನರಿಗೆ ಸಹಾಯ ಮಾಡಲಿ ಸಾಕು. ಅವರು ಕೋವಿಡ್‌ ತಡೆದರಾ ಇಲ್ಲವಾ ಎಂಬುದರ ಚರ್ಚೆ ಬೇಡ..

DK Shivakumar reaction on mekedatu padayatra issue in Bangalore
ನಮ್ಮನ್ನು ನೂರು ಬಾರಿ ಜೈಲಿಗೆ ಕಳುಹಿಸಿದರೂ ನಾವು ಹೆದರುವುದಿಲ್ಲ: ಡಿಕೆಶಿ
author img

By

Published : Jan 4, 2022, 4:20 PM IST

Updated : Jan 4, 2022, 5:20 PM IST

ಬೆಂಗಳೂರು : ಮೇಕೆದಾಟು ಪಾದಯಾತ್ರೆ, ಸದಸ್ಯತ್ವ ಅಭಿಯಾನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿಂದು ಸರಣಿ ಸಭೆ ನಡೆಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತಂತೆ ನಮ್ಮನ್ನು ನೂರು ಬಾರಿ ಜೈಲಿಗೆ ಕಳುಹಿಸಿದರೂ ನಾವು ಹೆದರುವುದಿಲ್ಲ ಎಂದು ಡಿಕೆಶಿ ಸ್ಪಷ್ಟನೆ ನೀಡಿರುವುದು..

ಸಭೆಗೂ ಮುನ್ನ ರಾಮನಗರ ಘಟನೆ ಹಿನ್ನೆಲೆ ಬಿಜೆಪಿಯವರು ರಾಜ್ಯಾದ್ಯಂತ ನಡೆಸುತ್ತಿರುವ ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಕೇವಲ ರಾಜ್ಯಾದ್ಯಂತ ಅಲ್ಲ, ಇಡೀ ದೇಶಾದ್ಯಂತ ಮಾಡಲಿ.

ಅವರ ಸಚಿವರು ಆಡಿರುವ ನುಡಿಮುತ್ತಗಳನ್ನು ಬಿಜೆಪಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು, ಆರ್.ಅಶೋಕ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಪ್ರಮಾಣೀಕರಿಸಿ ಸಮರ್ಥಿಸಿದ್ದಾರೆ. ಅವರಿಗೆ ಇನ್ನಷ್ಟು ಬಿರುದು, ಬಡ್ತಿ ನೀಡಲಿ. ಅವರ ಸಂಸ್ಕೃತಿಯ ದರ್ಶನ ಎಲ್ಲರಿಗೂ ಗೊತ್ತಾಗಿದೆ ಎಂದರು.

ಆರೋಗ್ಯ ಸಚಿವ ಸುಧಾಕರ್ ಅವರು ಕೊರೊನಾ ಹಿನ್ನೆಲೆ ಪಾದಯಾತ್ರೆ ನಿಲ್ಲಿಸಲು ಮನವಿ ಮಾಡುತ್ತೇನೆ ಎಂದು ನೀಡಿರುವ ಹೇಳಿಕೆಗೆ ಉತ್ತರಿಸಿದ ಡಿಕೆಶಿ ಅವರು, ಬಹಳ ಸಂತೋಷ. ಅವರು ತಮಗೆ ಸಿಕ್ಕಿರುವ ಜವಾಬ್ದಾರಿ ಬಳಸಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ವಸೂಲಿ ಮಾಡಿಕೊಂಡು ಬರಲಿ. ಜನರಿಗೆ ಸಹಾಯ ಮಾಡಲಿ ಸಾಕು. ಅವರು ಕೋವಿಡ್‌ ತಡೆದರಾ ಇಲ್ಲವಾ ಎಂಬುದರ ಚರ್ಚೆ ಬೇಡ.

ಬಿಜೆಪಿಯವರ ವಿರುದ್ಧ ಪ್ರಕರಣ ಯಾಕಿಲ್ಲ?

ಕೊರೊನಾ ವಿಚಾರವಾಗಿ ವಿಮಾನ ನಿಲ್ದಾಣದಲ್ಲಿ ಯಾವ ರೀತಿ ಕಿರುಕುಳ ನೀಡಲಾಗುತ್ತಿದೆ ಎಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಲಿ. ಸಚಿವ ಸುಧಾಕರ್ ಅವರು ಮೊದಲು ಅಲ್ಲಿಗೆ ಹೋಗಿ ನೋಡಲಿ. ನಮ್ಮ ಪಾದಯಾತ್ರೆ ಅದರ ಪಾಡಿಗೆ ನಡೆಯುತ್ತದೆ ಎಂದರು.

ಸೋಂಕು ಹೆಚ್ಚಾದರೆ ಕಾಂಗ್ರೆಸ್ ಹೊಣೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಈಗಾಗಲೇ ನಮ್ಮ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ. ಬಿಜೆಪಿಯವರು ಕೋವಿಡ್ ಸಮಯದಲ್ಲಿ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದರೂ ಯಾಕೆ ಅವರ ವಿರುದ್ಧ ಸಮನ್ಸ್ ಜಾರಿ ಮಾಡಿ ಪ್ರಕರಣ ದಾಖಲಿಸಿಲ್ಲ? ಸಚಿವರ ಮೇಲೆ ಪ್ರಕರಣ ಯಾಕಿಲ್ಲ? 100 ನಾಟೌಟ್ ಪ್ರತಿಭಟನೆ ಮಾಡಿದ ನಮ್ಮೆಲ್ಲ ನಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನೂರು ಪ್ರಕರಣ ದಾಖಲಿಸಿ, ನಮ್ಮನ್ನು ನೂರು ಬಾರಿ ಜೈಲಿಗೆ ಕಳುಹಿಸಿದರೂ ನಾವು ಹೆದರುವುದಿಲ್ಲ. ರಾಜ್ಯದ ಜನರ ಪರವಾಗಿ, ಅವರ ಧ್ವನಿಯಾಗಿ ನಾವು ಹೋರಾಟ ಮಾಡುತ್ತೇವೆ ಎಂದರು.

ರಾಮನಗರ ರಿಪಬ್ಲಿಕ್ ಆಗಲು ಬಿಡುವುದಿಲ್ಲ ಎಂಬ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಉತ್ತರ ನೀಡಲು ಜನರೇ ಇದ್ದಾರೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: ಲಾಕ್​ಡೌನ್​ ಜಾರಿಯಾದರೂ ನಾವು ನಮ್ಮ ಪಾದಯಾತ್ರೆ ನಿಲ್ಲಿಸುವುದಿಲ್ಲ: ಸರ್ಕಾರಕ್ಕೆ ಡಿಕೆಶಿ ಸವಾಲು

Last Updated : Jan 4, 2022, 5:20 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.