ETV Bharat / city

ಬಿಟ್​ ಕಾಯಿನ್​​ ದಾಖಲೆ ಸಂಗ್ರಹ 100 ಪರ್ಸೆಂಟ್, ಸೂಕ್ತ ಸಮಯದಲ್ಲಿ ಬಿಡುಗಡೆ : ಡಿಕೆಶಿ - ಹ್ಯಾಕರ್​ ಶ್ರೀಕಿ ಬಿಟ್​ ಕಾಯಿನ್​ ದಂಧೆ

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್​ ಕಾಯಿನ್ ಪ್ರಕರಣವನ್ನು (Bitcoin scam)​ ಮುಚ್ಚಿ ಹಾಕಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ. ಈ ಪ್ರಕರಣದ ಕುರಿತು ನಾವು ದಾಖಲೆ ಸಂಗ್ರಹಿಸುತ್ತಿದ್ದೇವೆ. ಸರಿಯಾದ ಸಮಯ ನೋಡಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ (D K Shivakumar) ಹೇಳಿದರು..

dk-shivakumar-statement-on-bitcoin-scam
ಡಿಕೆ ಶಿವಕುಮಾರ್
author img

By

Published : Nov 12, 2021, 5:27 PM IST

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣ ( bitcoin scam ) ಸಂಬಂಧ 100 ಪರ್ಸೆಂಟ್ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ. ನಾವು ಹೋಗಿ ಯಾವುದೇ ದಾಖಲೆ ಹುಡುಕುತ್ತಿಲ್ಲ. ಸರ್ಕಾರದ ಮಂತ್ರಿಗಳು, ಅಧಿಕಾರಿಗಳೇ ನಮಗೆ ಅದನ್ನು ಒದಗಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಬಿಟ್​ ಕಾಯಿನ್ ದಂಧೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿರುವುದು..

ನಗರದ ಪದ್ಮನಾಭನಗರದಲ್ಲಿ ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದರು. ಬಿಜೆಪಿ ಸರ್ಕಾರ ಬಿಟ್​​ ಕಾಯಿನ್​ ಹಗರಣ (bitcoin scam issue) ವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಸಿಎಂ ಹಾಗೂ ಗೃಹ ಸಚಿವರು ಈ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ.

ನಿನ್ನೆ ಕುಮಾರಸ್ವಾಮಿ ಅವರು ಕೂಡ ಹೇಳಿದ್ದಾರೆ. ಸರ್ಕಾರ ಪ್ರಕರಣದ ವಿಚಾರವಾಗಿ ಅವರಿಗೆ ಅನುಕೂಲವಾಗುವ ಅಂಶಗಳನ್ನು ಮಾತ್ರ ಮಾಧ್ಯಮದಲ್ಲಿ ಬಿಡುಗಡೆ ಮಾಡುತ್ತಿದೆ ಎಂದರು.

ಪ್ರಧಾನಮಂತ್ರಿಗಳಿಗೆ ಬರೆಯಲಾಗಿರುವ ಪತ್ರದ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ? ಅದು ನಿಜಾನಾ, ಸುಳ್ಳಾ? ಈ ಬಗ್ಗೆ ತನಿಖೆ ನಡೆಯುತ್ತಿದೆ. ಅದು ಏನಾಗಿದೆ ಎಂದು ಹೇಳುತ್ತಿಲ್ಲ. ಈ ಪ್ರಕರಣದಲ್ಲಿ ಹ್ಯಾಕಿಂಗ್ ನಡೆದಿದೆಯಾ ಇಲ್ಲವಾ? ಎಂಬುದಷ್ಟೇ ಮುಖ್ಯ. ಸತ್ಯಾಂಶವನ್ನು ಸರ್ಕಾರ ಜನರ ಮುಂದೆ ಇಡಬೇಕು ಎಂದು ಹೇಳಿದರು.

ಪ್ರಧಾನಿಗಳೇ ಮುಖ್ಯಮಂತ್ರಿಗಳಿಗೆ ಈ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಧಾನಮಂತ್ರಿಗಳು ಬಿಟ್ಟುಬಿಡಿ ಎಂದ ಮಾತ್ರಕ್ಕೆ ನಾವ್ಯಾಕೆ ಬಿಟ್ಟು ಬಿಡಬೇಕು?. ದೇಶದಲ್ಲಿ ಅವ್ಯವಹಾರ ಯಾರೇ ಮಾಡಿದರೂ ತಪ್ಪೇ. ಅದು ಕಾಂಗ್ರೆಸ್ ಅವರಾಗಲಿ, ಬೇರೆ ಪಕ್ಷದವರಾಗಲಿ, ಜನರೇ ಆಗಲಿ. ಅದರ ಸತ್ಯಾಂಶ ಏನು ಎಂಬುದು ತಿಳಿಯಬೇಕು.

ಪೊಲೀಸರು ಮಾಡಿದ ತನಿಖೆಯನ್ನು ಈಗ ಇಡಿಗೆ ನೀಡಿದ್ದೇವೆ ಎಂದು ಹೇಳುತ್ತಿದ್ದಾರೆ. ಒಂದು, ಐದು, ಹತ್ತು, ಸಾವಿರ ಕಾಯಿನ್ ಅವ್ಯವಹಾರ ಆಗಿದೆಯೋ. ಆ ಸತ್ಯಾಂಶವನ್ನು ಹೊರಗಿಡಬೇಕು ಅಷ್ಟೇ ಎಂದು ಉತ್ತರಿಸಿದರು.

dk-shivakumar-statement-on-bitcoin-scam
ಪದ್ಮನಾಭನಗರದಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ

ಕಾಂಗ್ರೆಸ್​ ಕಚೇರಿ ಉದ್ಘಾಟನೆ: ಪದ್ಮನಾಭನಗರದಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಯಿತು. ಈ ಕಚೇರಿ ನಿರ್ಮಾಣಕ್ಕೆ ಸಹಕರಿಸಿದ ರಘುನಾಥ ನಾಯ್ಡು ಅವರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅವರು ಟಿಕೆಟ್ ನೀಡಿ ಎಂದು ಕೇಳಿಲ್ಲ.

ಪಕ್ಷದ ಸಂಘಟನೆಗಾಗಿ ನೀವು ಹೇಳಿದ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದರು. ಅಲ್ದೆ, ಇದು ನಮ್ಮ ಪಾಲಿಗೆ ದೇವಸ್ಥಾನ ಇದ್ದಂತೆ. ಬಸವನಗುಡಿ ಹಾಗೂ ಪದ್ಮನಾಭನಗರ ಕ್ಷೇತ್ರದ ಜನ ಬಳಸಿಕೊಳ್ಳಬಹುದು. ನೀವೆಲ್ಲಾ ಸೇರಿ ಕೆಲಸ ಮಾಡಿ. ಇಲ್ಲಿ ಯಾವುದೇ ಗುಂಪು ಇಲ್ಲ. ಇರೋದು ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು ಎಂದು ತಿಳಿಸಿದರು.

ಸದಸ್ಯತ್ವ ಅಭಿಯಾನ: ಇದೇ 14 ರಂದು ಜವಾಹರಲಾಲ್ ನೆಹರು ಅವರ ಜನ್ಮದಿನ, ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಪ್ರಾರಂಭವಾಗುತ್ತಿದೆ. 12 ವರ್ಷಗಳ ನಂತರ ಈ ಅಭಿಯಾನ ಮಾಡುತ್ತಿದ್ದು, ಬಸವನಗುಡಿ ಕ್ಷೇತ್ರದಿಂದ ಕನಿಷ್ಠ 25 ಸಾವಿರ ಸದಸ್ಯರನ್ನು ಮಾಡುವ ಗುರಿ ನಿಮ್ಮದಾಗಬೇಕು ಎಂದರು.

ಪಾದಯಾತ್ರೆ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತೇವೆ. ನಾವು ಪದ್ಮನಾಭನಗರ ಹಾದಿಯಾಗಿ ನಗರದ ನಾನಾ ಕಡೆ ಪಾದಯಾತ್ರೆ ಮಾಡಲಿದ್ದೇವೆ. ಇದರಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಬೇಕು. ಈ ಯೋಜನೆ ಜಾರಿಯಾಗಿ ಬೆಂಗಳೂರು ನಗರದ ಜನರಿಗೆ ಕುಡಿಯುವ ನೀರು ಸಿಗಬೇಕು.

ತಮಿಳುನಾಡಿಗೆ ಕೊಡಬೇಕಾದ ನೀರು ಸರಿಯಾಗಿ ಕೊಟ್ಟು ಉಳಿದ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಈ ಯೋಜನೆಗೆ ಆಗ್ರಹಿಸೋಣ, ಹೋರಾಟ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

dk-shivakumar-statement-on-bitcoin-scam
ಕೆಂಪೇಗೌಡರಿಗೆ ನಮನ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ

ಕೆಂಪೇಗೌಡರಿಗೆ ಪುಷ್ಪ ನಮನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಾಪೂಜಿ ನಗರದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಕೆಂಪೇಗೌಡರ ಸಾರ್ವಜನಿಕ ಗ್ರಂಥಾಲಯ ಉದ್ಘಾಟನೆ, ಆದಿಶಕ್ತಿ ಹುಲಿಯೂರಮ್ಮದೇವಿ ವಿಗ್ರಹ ಪ್ರತಿಷ್ಠಾಪನೆ, ಕೆಂಪೇಗೌಡರ ಸೊಸೆ ಲಕ್ಷ್ಮಿದೇವಿಯವರ ಪ್ರತಿಮೆ ಉದ್ಘಾಟನೆಯನ್ನು ಶುಕ್ರವಾರ ನೆರವೇರಿಸಿದರು. ಕನ್ನಡ ಪ್ರಕಾಶ್ ಮತ್ತಿತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.