ಬೆಂಗಳೂರು: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ತುಳಸಿ ಪೂಜೆ ವಿಶೇಷ ವಿಡಿಯೋ ಬಿಡುಗಡೆ ಮಾಡಿರುವ ಅವರು ಲಖೀಮ್ಪುರ ಹಿಂಸಾಚಾರದಲ್ಲಿ ರೈತರು ಮೃತಪಟ್ಟ ಘಟನೆಯನ್ನು ಉದ್ದೇಶವಾಗಿಟ್ಟುಕೊಂಡು ಮಾತನಾಡಿರುವ ಶಿವಕುಮಾರ್, ನಿಮ್ಮ ಸಮೀಪದಲ್ಲಿ ಬಿಜೆಪಿ ನಾಯಕರು ವಾಹನದಲ್ಲಿ ತೆರಳುತ್ತಿದ್ದರೆ ವಿಡಿಯೋ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೋ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದಿದ್ದಾರೆ.
ಬಿಜೆಪಿ ನಾಯಕರು ತೆರಳುವಾಗ ಸಾರ್ವಜನಿಕರು ಜಾಗೃತರಾಗಿರಬೇಕು ಎಂದಿರುವ ಅವರು, ಯಾರ ಮೇಲೆ, ಯಾವತ್ತು, ಎಷ್ಟು ಗಂಟೆಗೆ ವಾಹನ ಚಲಾಯಿಸಿ ಸಾಯಿಸುತ್ತಾರೆ ಎನ್ನುವುದು ತಿಳಿಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ತಾವು ಎಲ್ಲವನ್ನು ಗಮನಿಸುತ್ತಿದ್ದೀರಿ. ಇಂತಹ ಸಂದರ್ಭಗಳು ಎದುರಾದ ವೇಳೆ ವಿಡಿಯೋ ಚಿತ್ರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಉತ್ತರಪ್ರದೇಶ ಘಟನೆಯನ್ನು ದೇಶಾದ್ಯಂತ ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರು ನಿರಂತರವಾಗಿ ಬಿಜೆಪಿ ಸರ್ಕಾರದ ಇದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.