ETV Bharat / city

ಬಿಬಿಎಂಪಿ ಚುನಾವಣೆ ಸಂಬಂಧ ಹೈಕೋರ್ಟ್ ಆದೇಶ ಸ್ವಾಗತಿಸಿದ ಡಿ.ಕೆ.ಶಿವಕುಮಾರ್ - BBMP Election 2020

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಎದುರಾಗಿದ್ದ ಅಡ್ಡಿ ಆತಂಕಗಳು ಇಂದು ನಿವಾರಣೆಯಾಗಿದ್ದು, ಆರು ವಾರಗಳ ಅವಧಿಯಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ.

DK Shivakumar Welcomed High Court Order
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
author img

By

Published : Dec 4, 2020, 10:38 PM IST

ಬೆಂಗಳೂರು: ಮುಂದಿನ ಆರು ವಾರಗಳ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್​ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ.

'ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವಧಿಗೆ ಅನುಗುಣವಾಗಿ ಚುನಾವಣೆಗಳು ನಡೆಯಬೇಕು. ಬಿಜೆಪಿ ಸರ್ಕಾರ ಇದನ್ನು ಮುಂದಕ್ಕೆ ತಳ್ಳಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿತ್ತು. ಆದರೆ ನ್ಯಾಯಾಲಯ ಅದರ ಹುನ್ನಾರಕ್ಕೆ ಕಡಿವಾಣ ಹಾಕಿ, ಚುರುಕು ಮುಟ್ಟಿಸಿದೆ. ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸುತ್ತೇವೆ' ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

'ಬಿಜೆಪಿಯವರು ಗ್ರಾಮ ಪಂಚಾಯತಿ ಚುನಾವಣೆಯನ್ನೂ ಮುಂದೂಡಲು ಪ್ರಯತ್ನಿಸಿದ್ದರು. ಜನಸಾಮಾನ್ಯರಿಗೆ ಅಧಿಕಾರ ಸಿಗಬೇಕು ಎಂಬುದು ಕಾಂಗ್ರೆಸ್ ಉದ್ದೇಶ. ಹೀಗಾಗಿ ಸರ್ಕಾರದ ತೀರ್ಮಾನದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆಗಲೂ ನ್ಯಾಯಾಲಯ ನಮ್ಮ ಅಹವಾಲಿಗೆ ಮನ್ನಣೆ ನೀಡಿತ್ತು. ಗ್ರಾಮ ಪಂಚಾಯತಿ ಚುನಾವಣೆ ಅಧಿಸೂಚನೆ ಪ್ರಕಟವಾದಾಗ, ಬಿಬಿಎಂಪಿ ಚುನಾವಣೆಯನ್ನೂ ನಡೆಸಬೇಕು ಎಂದು ನಾನು ಒತ್ತಾಯಿಸಿದ್ದೆ. ಸರ್ಕಾರ ಇದಕ್ಕೆ ಕಿವಿಗೊಡಲಿಲ್ಲ. ಹೀಗಾಗಿ ಬಿಬಿಎಂಪಿ ಚುನಾವಣೆ ನಡೆಸಲು ನಮ್ಮ ಪಕ್ಷ ಮತ್ತೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ಕೋರ್ಟ್ ನೀಡಿರುವ ತೀರ್ಪು ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯವನ್ನು ಎತ್ತಿಹಿಡಿದಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ತಾವು ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬಿಬಿಎಂಪಿ ಚುನಾವಣೆ ಮುಂದೂಡುವ ಸರ್ಕಾರದ ತಂತ್ರ ಫಲಿಸಿಲ್ಲ : ಎಂ ಶಿವರಾಜು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.