ETV Bharat / city

ಡಿ.ಕೆ. ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ: ಜಿ. ಪರಮೇಶ್ವರ್ - ಡಿ.ಕೆ.ಶಿವಕುಮಾರ್ ಬಂಧನ

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣದಲ್ಲಿ ನಡೆಯುತ್ತಿರುವ ಬೆಳಗವಣಿಗಳನ್ನು ಗಮನಿಸಿದರೆ ರಾಜಕೀಯ ಪ್ರೇರಿತ ಎನಿಸುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

DK Shivakumar's arrest is politically motivated
author img

By

Published : Sep 6, 2019, 10:06 PM IST

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕರಣದಲ್ಲಿ ನಡೆಯುತ್ತಿರುವ ಬೆಳಗವಣಿಗಳನ್ನು ಗಮನಿಸಿದರೆ ರಾಜಕೀಯ ಪ್ರೇರಿತ ಎನಿಸುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿ ಶಿವಕುಮಾರ್ ಪತ್ನಿ ಉಷಾ ಹಾಗೂ ಮಕ್ಕಳಿಗೆ ಧೈರ್ಯ ತುಂಬಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ಅಧಿಕಾರಿಗಳ ತನಿಖೆಗೆ ಡಿ.ಕೆ.ಶಿವಕುಮಾರ್ ಸಹಕರಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಸಲಿ. ಅದಕ್ಕೆ ಆಕ್ಷೇಪ ಇಲ್ಲ. ಆದರೆ, ಇದರಲ್ಲಿ ರಾಜಕೀಯ ವೈಷಮ್ಯ ಹೆಚ್ಚಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಬೆಂಗಳೂರು ಕಾಂಗ್ರೆಸ್​ ಶಾಸಕರಿಗೆ ಆಹ್ವಾನ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಕರೆದು ಸಭೆ ಮಾಡುತ್ತಿದ್ದೆವು. ಬೆಂಗಳೂರಲ್ಲಿ ಅನರ್ಹರು ಸೇರಿ ಕಾಂಗ್ರೆಸ್ ನ 15 ಜನ ಶಾಸಕರು ಇದ್ದಾರೆ. ರಾಜ್ಯಸಭಾ ಸದಸ್ಯರು ಸಹ ಇದ್ದಾರೆ. ಹೀಗಾಗಿ ಎಲ್ಲರನ್ನು ಸಭೆಗೆ ಕರೆಯಬೇಕು ಎಂದರು.

ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಬಗ್ಗೆ ತನಿಖೆಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಯಾರು ತಪ್ಪು ಮಾಡಿದ್ದಾರೋ ತನಿಖೆಯಿಂದ ಗೊತ್ತಾಗಲಿ. ಆದರೆ, ತನಿಖೆ ಹೆಸರಲ್ಲಿ ಅಭಿವೃದ್ಧಿ ಕಾಮಗಾರಿ ನಿಲ್ಲಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ.

Intro:ಬೆಂಗಳೂರು : ಡಿ.ಕೆ. ಶಿವಕುಮಾರ್ ಪ್ರಕರಣದಲ್ಲಿ ನಡೆಯುತ್ತಿರುವ ಬೆಳಗವಣಿಗಳನ್ನು ಗಮನಿಸಿದರೆ ಇದು ರಾಜಕೀಯ ಪ್ರೇರಿತ ಅನಿಸುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.Body:ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿ ಶಿವಕುಮಾರ್ ಪತ್ನಿ ಉಷಾ ಹಾಗೂ ಮಕ್ಕಳಿಗೆ ಧೈರ್ಯ ತುಂಬಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದ ತನಿಖೆಗೆ ಡಿ.ಕೆ. ಶಿವಕುಮಾರ್ ಸಹಕರಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಸಲಿ. ಕಾನೂನು ಪ್ರಕಾರ ಕ್ರಮ ಕೈಗೊಂಡರೆ ನಮ್ಮದೇನು ಆಕ್ಷೇಪ ಇಲ್ಲ. ಆದರೆ, ಈ ಪ್ರಕರಣದಲ್ಲಿ
ಕಾನೂನಿಗಿಂತಲೂ ರಾಜಕೀಯ ವೈಷಮ್ಯ ಹೆಚ್ಚು ಇದೆ ಅಂತ ಕಾಣಿಸುತ್ತಿದೆ. ಹೀಗಾಗಿ ಅವರ ಕುಟುಂಬ ಸದಸ್ಯರನ್ನು ಭೇಟಿ ಯಾಗಿ ಧೈರ್ಯ ತುಂಬುವ ಕೆಲಸ ಮಾಡಲು ಬಂದಿದ್ದೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರು ಕೈ ಶಾಸಕರಿಗೆ ಅಹ್ವಾನ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಕರೆದು ಸಭೆ ಮಾಡುತ್ತಿದ್ದೆವು. ಬೆಂಗಳೂರಲ್ಲಿ ಅನರ್ಹರು ಸೇರಿ ಕಾಂಗ್ರೆಸ್ ನ 15 ಜನ ಶಾಸಕರು ಇದ್ದಾರೆ. ರಾಜ್ಯಸಭಾ ಸದಸ್ಯರು ಸಹ ಇದ್ದಾರೆ. ಹೀಗಾಗಿ ಸಭೆಗೆ ಕರೆಯಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ಹೇಳಿದರು.
ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಬಗ್ಗೆ ತನಿಖೆಗೆ ಕೊಟ್ಟಿರುವುದನ್ನು ನಾನು ಸ್ವಾಗತಿಸುತ್ತೇನೆ. ಯಾರು ತಪ್ಪು ಮಾಡಿದ್ದಾರೋ ತನಿಖೆಯಿಂದ ಗೊತ್ತಾಗಲಿ. ಆದರೆ, ತನಿಖೆ ಹೆಸರಲ್ಲಿ ಅಭಿವೃದ್ಧಿ ಕಾಮಗಾರಿ ನಿಲ್ಲಿಸುವುದು ಬೇಡ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಸಹ ಆಗಮಿಸಿ ಡಿ.ಕೆ. ಶಿವಕುಮಾರ್ ಕುಟುಂಬದವರಿಗೆ ಧೈರ್ಯ ಹೇಳಿದರು. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.