ETV Bharat / city

ರಾಷ್ಟ್ರೀಯ ನಾಯಕರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಡಿಕೆಶಿ - ಬೆಂಗಳೂರು ಸುದ್ದಿ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ‌ ಪಾಲ್ಗೊಂಡಿದ್ದ ಡಿಕೆಶಿ, ತಮ್ಮ ಹಾಗೂ ಕಾರ್ಯಧ್ಯಕ್ಷರ ಪದಗ್ರಹಣ ಸಮಾರಂಭದ ಸಿದ್ಧತೆ ಕುರಿತು ವಿವರ ನೀಡಿದರು.

ರಾಷ್ಟ್ರೀಯ ನಾಯಕರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಡಿಕೆಶಿ
author img

By

Published : Jun 25, 2020, 2:25 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಷ್ಟ್ರೀಯ ನಾಯಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.

ರಾಷ್ಟ್ರೀಯ ನಾಯಕರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಡಿಕೆಶಿ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ‌ ಪಾಲ್ಗೊಂಡಿದ್ದ ಡಿಕೆಶಿ, ತಮ್ಮ ಹಾಗೂ ಕಾರ್ಯಧ್ಯಕ್ಷರ ಪದಗ್ರಹಣ ಸಮಾರಂಭದ ಸಿದ್ಧತೆ ಕುರಿತು ವಿವರ ನೀಡಿದರು. ಸಮಾರಂಭದ ಆಯೋಜನೆ ಸಿದ್ಧತೆ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ತಲುಪಿಸುವ ವಿಚಾರದ ಕುರಿತು ವಿವರಿಸಿದರು. ಇದರ ಜೊತೆಗೆ ಪಕ್ಷ ಬಲವರ್ಧನೆಗೆ ಹಾಗೂ ಸಂಘಟನೆಗೆ ಅಗತ್ಯವಿರುವ ನಿಟ್ಟಿನಲ್ಲಿ ತಾವು ಕೈಗೊಳ್ಳುತ್ತಿರುವ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಮುಖಂಡರ ಭೇಟಿ: ಭಾರತೀಯ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಉಸ್ತುವಾರಿ ಕೃಷ್ಣ ಅಳ್ಳವರು ಮತ್ತು ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಬಿ.ವಿ.ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಸನ ಗೌಡ ಬಾದರ್ಲಿ ಅವರು ಉಪಸ್ಥಿತರಿದ್ದರು.

ವಕ್ತಾರರ ಜೊತೆ ಸಭೆ: ಡಿ.ಕೆ ಶಿವಕುಮಾರ್ ಅವರು, ಪ್ರತಿಜ್ಞಾವಿಧಿ ಕಾರ್ಯಕ್ರಮ ಕುರಿತಂತೆ ಪಕ್ಷದ ವಕ್ತಾರರ ಜತೆ ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ಬುಧವಾರ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಮಾಧ್ಯಮ ವಿಭಾಗ ಮುಖ್ಯಸ್ಥರಾದ ವಿ.ಎಸ್ ಉಗ್ರಪ್ಪ, ಬಿ.ಎಲ್​.ಶಂಕರ್, ಸುದರ್ಶನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಫೀವುಲ್ಲಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.