ETV Bharat / city

ಇಂದು, ನಾಳೆ ಮೈಸೂರು-ಮಂಡ್ಯದಲ್ಲಿ ಡಿಕೆಶಿ ಟೆಂಪಲ್​​ ರನ್​​​

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದು ಮೈಸೂರು ಹಾಗೂ ನಾಳೆ ಮಂಡ್ಯ ಜಿಲ್ಲೆಯಲ್ಲಿ ಟೆಂಪಲ್ ರನ್ ಮಾಡಲಿದ್ದಾರೆ.

ಡಿ.ಕೆ.ಶಿವಕುಮಾರ್
author img

By

Published : Nov 6, 2019, 10:42 AM IST

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದು ಮೈಸೂರು ಹಾಗೂ ನಾಳೆ ಮಂಡ್ಯ ಜಿಲ್ಲೆಯಲ್ಲಿ ಟೆಂಪಲ್ ರನ್ ಮಾಡಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿಗೆ ತೆರಳುವ ಶತಾಬ್ದಿ ಎಕ್ಸ್​ಪ್ರೆಸ್​ ರೈಲಿನ ಮೂಲಕ ಹೊರಟು ಸಂಜೆ 3 ಗಂಟೆಗೆ ಮೈಸೂರು ತಲುಪಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 5ಕ್ಕೆ ಸುತ್ತೂರು ಮಠಕ್ಕೆ ಭೇಟಿ ಕೊಟ್ಟು, ಶ್ರೀಗಳ ಭೇಟಿ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಗುರುವಾರ ಬೆಳಿಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ, ಅಲ್ಲಿಂದ ಶ್ರೀರಂಗಪಟ್ಟಣಕ್ಕೆ ತೆರಳಿ ರಂಗನಾಥಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಟಿಪ್ಪು ಸುಲ್ತಾನ್ ಮಸೀದಿಗೆ ಭೇಟಿ ನೀಡಿ, ಅಲ್ಲಿಂದ ಮಂಡ್ಯಕ್ಕೆ ತೆರಳಿದ್ದಾರೆ.

12 ಗಂಟೆಗೆ ಮಂಡ್ಯದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ 1.30ಕ್ಕೆ ಮದ್ದೂರಿನ ಮದ್ದೂರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ನಿವಾಸಕ್ಕೆ ಸಂಜೆ 3 ಗಂಟೆಗೆ ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

Intro:newsBody:ನಾಳೆ ನಾಡಿದ್ದು ಮೈಸೂರು ಮತ್ತು ಮಂಡ್ಯದಲ್ಲಿ ಡಿಕೆಶಿ ಟೆಂಪಲ್ ರನ್

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ನಾಳೆ ಮೈಸೂರು ಹಾಗೂ ನಾಡಿದ್ದು ಮಂಡ್ಯ ಜಿಲ್ಲೆಯಲ್ಲಿ ಟೆಂಪಲ್ ರನ್ ಮಾಡಲಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಿಂದ ನಾಳೆ ಬೆಳಗ್ಗೆ ಮೈಸೂರಿಗೆ ಪ್ರಯಾಣ ಬೆಳೆಸುವವರು ನಾಳೆಯಿಂದ ಮತ್ತೆ ದೇವಸ್ಥಾನಗಳ ಭೇಟಿ
ಚಾಮುಂಡಿ ಬೆಟ್ಟ, ರಂಗನಾಥ ಸ್ವಾಮಿ ದೇವಸ್ಥಾನ, ನಿಮಿಷಾಂಬ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ನಾಡಿದ್ದು ಮಂಡ್ಯ ಜಿಲ್ಲೆಗೆ ಭೇಟಿ ಕೊಡಲಿದ್ದಾರೆ. ಈ ಸಂದರ್ಭ ಮಂಡ್ಯದ ಕಾಳಿಕಾಂಬ ದೇವಾಲಯ ಹಾಗೂ ಮದ್ದೂರಿನ ಮದ್ದೂರಮ್ಮನ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಈ ಸಂದರ್ಭ ಇವರೊಂದಿಗೆ ಕುಟುಂಬ ಸದಸ್ಯರು ಉಪಸ್ಥಿತರಿರಲಿದ್ದಾರೆ ಎಂಬ ಮಾಹಿತಿ ಇದೆ. ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರಿಗೆ ತೆರಳುವ ಶತಾಬ್ದಿ ಎಕ್ಸ್ಪ್ರೆಸ್ ರೈಲಿನ ಮೂಲಕ ಹೊರಟು ಸಂಜೆ 3ಗಂಟೆಗೆ ಮೈಸೂರು ತಲುಪಲಿದ್ದಾರೆ. ಸಂಜೆ ನಾಲ್ಕಕ್ಕೆ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸುವರು. ಸಂಜೆ 5ಕ್ಕೆ ಸುತ್ತೂರು ಮಠಕ್ಕೆ ಭೇಟಿಕೊಟ್ಟು ಶ್ರೀಗಳ ಭೇಟಿ ಹಾಗೂ ಪೂಜಾಕಾರ್ಯದಲ್ಲಿ ಭಾಗಿಯಾಗುವ. ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಊರಲ್ಲಿರುವ ಅವರು ನಾಡಿದ್ದು ಬೆಳಿಗ್ಗೆ 8 ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿ ಅಲ್ಲಿಂದ ಶ್ರೀರಂಗಪಟ್ಟಣಕ್ಕೆ ತೆರಳಿ ಅಲ್ಲಿನ ರಂಗನಾಥಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸಿ ನಂತರ ಟಿಪ್ಪು ಸುಲ್ತಾನ್ ಮಸೀದಿಗೆ ಭೇಟಿ ಕೊಡುವರು.
ಅಲ್ಲಿಂದ ಮಂಡ್ಯದತ್ತ ಪ್ರಯಾಣ ಬೆಳೆಸುವರು. 12 ಗಂಟೆಗೆ ಮಂಡ್ಯದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮದ್ದೂರಿನತ್ತ ಪ್ರಯಾಣ ಬೆಳೆಸುವರು. 1.30ಕ್ಕೆ ಇಲ್ಲಿ ಪೂಜೆ ಸಲ್ಲಿಸಿ ನಂತರ ಚನ್ನಪಟ್ಟಣದತ್ತ ಪ್ರಯಾಣ ಬೆಳೆಸುವರು. ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ನಿವಾಸಕ್ಕೆ (ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಅವರ ಆಪ್ತ ಸಹಾಯಕ)ಸಂಜೆ 3ಗಂಟೆಗೆ ಬೇಟಿಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವರು.
ಇದಾದ ಬಳಿಕ ರಸ್ತೆ ಮಾರ್ಗದಲ್ಲಿ ರಾಮನಗರ ಮೂಲಕ ಸಂಜೆ 6.30ಕ್ಕೆ ಬೆಂಗಳೂರು ಸದಾಶಿವನಗರ ನಿವಾಸ ತಲುಪುವರು.

Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.