ETV Bharat / city

ಓಲಾ ಬೈಕ್ ಟ್ಯಾಕ್ಸಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ - karnataka high court interim order says do not take action against ola bike taxi

ಓಲಾ ಕ್ಯಾಬ್ ನಡೆಸುತ್ತಿರುವ ಎಎನ್ಐ ಟೆಕ್ನಾಲಜೀಸ್ ಸಂಸ್ಥೆ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಪೀಠ, ಮುಂದಿನ ಆದೇಶದವರೆಗೆ ಓಲಾ ಬೈಕ್ ಟ್ಯಾಕ್ಸಿಗಳ ವಿರುದ್ಧ ರಾಜ್ಯ ಸರ್ಕಾರ, ಸಾರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದಂತೆ ಆದೇಶ ನೀಡಿದೆ.

do not take action against ola bike taxi; karnataka high court interim order
ಓಲಾ ಬೈಕ್ ಟ್ಯಾಕ್ಸಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ
author img

By

Published : Feb 25, 2022, 10:24 PM IST

ಬೆಂಗಳೂರು: ಓಲಾ ಬೈಕ್ ಟ್ಯಾಕ್ಸಿಗಳ ವಿರುದ್ಧ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಯಾವುದೇ ಕಠಿಣ ಕ್ರಮ ಜರುಗಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಓಲಾ ಕ್ಯಾಬ್ ನಡೆಸುತ್ತಿರುವ ಎಎನ್ಐ ಟೆಕ್ನಾಲಜೀಸ್ ಸಂಸ್ಥೆ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಪೀಠ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಓಲಾ ಬೈಕ್ ಟ್ಯಾಕ್ಸಿಗಳ ವಿರುದ್ಧ ರಾಜ್ಯ ಸರ್ಕಾರ, ಸಾರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಇದೇ ಫೆ. 18ರಂದು ಮಧ್ಯಂತರ ಆದೇಶ ನೀಡಿದೆ.

ರಾಜ್ಯದಲ್ಲಿ ಓಲಾ ಕ್ಯಾಬ್ ಹಾಗೂ ಓಲಾ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿರುವ ಎಎನ್ಐ ಟೆಕ್ನಾಲಾಜೀಸ್ ಸಂಸ್ಥೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಕೋರಿ ಸಾರಿಗೆ ಇಲಾಖೆಗೆ ಅರ್ಜಿ ಸಲ್ಲಿಸಿತ್ತು. 2004ರ ನವೆಂಬರ್ 5ರಂದು ಕೇಂದ್ರ ಸರ್ಕಾರ ಬೈಕ್‌ಗಳನ್ನು ಕಾಂಟ್ರಾಕ್ಟ್ ಕ್ಯಾರೇಜ್ ಸರ್ವೀಸ್‌ಗೆ ಬಳಸಲು ಅನುಮತಿ ನೀಡಿ ಹೊರಡಿಸಿರುವ ಅಧಿಸೂಚನೆ ಆಧರಿಸಿ, ಬೈಕ್ ಟ್ಯಾಕ್ಸಿ ಸರ್ವೀಸ್‌ಗೆ ಅನುಮತಿ ಕೋರಿತ್ತು. ಆದರೆ, ಸಾರಿಗೆ ಇಲಾಖೆ ಮನವಿಯನ್ನು ಪರಿಗಣಿಸಿರಿಲ್ಲ.

ಸಾರಿಗೆ ಇಲಾಖೆ ಮನವಿ ಪರಿಗಣಿಸದ ಹಿನ್ನೆಲೆಯಲ್ಲಿ ಎಎನ್ಐ ಟೆಕ್ನಾಲಜೀಸ್ 2019ರ ಮಾರ್ಚ್ 2ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ವೇಳೆ, ನ್ಯಾಯಾಲಯ ಯಾವುದೇ ಆದೇಶ ನೀಡಿರಲಿಲ್ಲ. 2021ರಲ್ಲಿ ಈ ಸಂಬಂಧ ಮೇಲ್ಮನವಿ ಸಲ್ಲಿಸಿದಾಗ (ರಿಟ್ ಅಪೀಲ್ 4010/2019) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಕೇಂದ್ರದ ಅಧಿಸೂಚನೆಯಂತೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ಸಂಬಂಧ 2 ತಿಂಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ಸರ್ಕಾರ ಹಾಗೂ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಎಎನ್ಐ ಟೆಕ್ನಾಲಜೀಸ್ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದೆ.

ಇದನ್ನೂ ಓದಿ: ಮಂಗಳೂರಲ್ಲಿ ಟ್ಯಾಕ್ಸಿ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ: ಚಾಲಕ ಸಾವು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.