ಬೆಂಗಳೂರು: ರಾಜಧಾನಿಯಲ್ಲಿ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಶ್ವಾನಗಳಿಗೆ ದುರುಳರು ವಿಷವುಣಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.
'ಪ್ರಾಣಿಗಳಿಗೆ ವಿಷ ಹಾಕಿ ಕೊಲ್ಲುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಅಡಿಯಲ್ಲಿ ಅಪರಾಧ. ನಾಯಿಗಳಿಗೆ ಆಹಾರದಲ್ಲಿ ವಿಷ ಹಾಕುವುದರಿಂದ ಇತರ ಪ್ರಾಣಿಗಳೂ ಸಾಯುವ ಸಾಧ್ಯತೆ ಇರುತ್ತದೆ. ಎಲ್ಲಾ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದೇವೆ' ಎಂದು ಸಾಮಾಜಿಕ ಹೋರಾಟಗಾರ ಅರುಣ್ ತಿಳಿಸಿದರು.
ಇದನ್ನೂ ಓದಿ: ಗರ್ಭಾವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೀರಾ? ಈ ಸಲಹೆಗಳನ್ನು ನೆನಪಿನಲ್ಲಿಡಿ..