ETV Bharat / city

ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ: 45ನೇ ದಿನವೂ ಮುಂದುವರೆದ ಧರಣಿ - ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ

ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು 45ನೇ ದಿನಕ್ಕೆ ಕಾಲಿಟ್ಟಿದೆ.

KN_BNG_02_MAURYA_CIRCLE_KANNADA_PROTEST_SCRIPT_9020923
45ನೇ ದಿನ ತಲುಪಿದ ಸರೋಜಿನಿ ಮಹಿಷಿ ಪರಿಷ್ಕೃತ ವರದಿ, ಜಾರಿ ಪ್ರತಿಭಟನೆ
author img

By

Published : Dec 18, 2019, 1:57 PM IST

ಬೆಂಗಳೂರು: ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು 45ನೇ ದಿನಕ್ಕೆ ಕಾಲಿಟ್ಟಿದೆ.

45ನೇ ದಿನ ತಲುಪಿದ ಧರಣಿ

ಮೌರ್ಯ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆಗೆ ಇದುವರೆಗೂ ಯಾವುದೇ ಫಲ ಕಂಡಿಲ್ಲ. 45ನೇ ದಿನದ ಹೋರಾಟ ಇಂದು ಕೂಡ ಮುಂದುವರೆದಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಧರಣಿನಿರತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ತಮ್ಮ ಕಾರ್ಯಕರ್ತರ ಜೊತೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮನೋಹರ್ ಕೂಡ ಇಂದು ಧರಣಿಯಲ್ಲಿ ಪಾಲ್ಗೊಂಡರು. ಹೋರಾಟಗಾರರ ಜೊತೆ ಕುಳಿತು ಘೋಷಣೆ ಕೂಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿದರು.

Intro:newsBody:45 ನೇ ದಿನ ತಲುಪಿದ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ ಆಗ್ರಹ ಹೋರಾಟ

ಬೆಂಗಳೂರು: ಡಾ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು 45ನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಿನ ಮೌರ್ಯ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆ ಇದುವರೆಗೂ ಯಾವುದೇ ಫಲ ಕಂಡಿಲ್ಲ. 45ನೇ ದಿನದ ಹೋರಾಟ ಇಂದು ಕೂಡ ಮುಂದುವರೆದಿದ್ದು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಧರಣಿ ನಿರತ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮನೋಹರ ಬೆಂಬಲ
ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ತಮ್ಮ ಕಾರ್ಯಕರ್ತರ ಜೊತೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮನೋಹರ್ ಕೂಡ ಇಂದು ಧರಣಿಯಲ್ಲಿ ಪಾಲ್ಗೊಂಡರು. ಹೋರಾಟಗಾರರ ಜೊತೆ ಕುಳಿತು ಘೋಷಣೆ ಕೂಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿದರು.
ಸಚಿವ ಡಾ ಅಶ್ವಥ್ ನಾರಾಯಣ್ ಪ್ರತಿಭಟನಾಕಾರರನ್ನು ಭೇಟಿಯಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವ ಭರವಸೆ ನೀಡಿ ತೆರಳಿದ್ದರು. ಆದರೆ ಸರ್ಕಾರ ಮಟ್ಟದಲ್ಲಿ ನಡೆಸಿದ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮಹಿಷಿ ವರದಿ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ರೀತಿ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿರುವ ಸಚಿವರ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ಪ್ರತಿನಿಧಿಗಳು ಅಭಿಪ್ರಾಯಪಟ್ಟರು.

Conclusion:news

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.