ETV Bharat / city

ಮಕ್ಕಳ ದತ್ತು ಸ್ವೀಕಾರಕ್ಕೆ ಕರಡು ನಿಯಮ ಸಿದ್ದ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಮಕ್ಕಳನ್ನು ದತ್ತುಪಡೆಯುವ ಸಂಬಂಧ ನಿಯಮಗಳನ್ನು ರೂಪಿಸುವಂತೆ ಹೈಕೋರ್ಟ್ 2021ರ ಆಗಸ್ಟ್ 19ರಂದು ನಿರ್ದೇಶಿಸಿತ್ತು. ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 11ರ ಅಡಿ ನಿಯಮಗಳನ್ನು ರೂಪಿಸುವಂತೆ ತಿಳಿಸಿತ್ತು..

Draft Rule for Adoption of Children: Government Information to High Court
ಮಕ್ಕಳ ದತ್ತು ಸ್ವೀಕಾರಕ್ಕೆ ಕರಡು ನಿಯಮ ಸಿದ್ದ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
author img

By

Published : Nov 27, 2021, 4:06 PM IST

ಬೆಂಗಳೂರು : ಮಕ್ಕಳನ್ನು ದತ್ತು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದ ಅನ್ವಯ ಕರಡು ನಿಯಮಗಳನ್ನು ಸಿದ್ದಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತು ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿದರು.

ಮಕ್ಕಳನ್ನು ದತ್ತುಪಡೆಯುವ ಸಂಬಂಧ ನಿಯಮಗಳನ್ನು ರೂಪಿಸುವಂತೆ ಹೈಕೋರ್ಟ್ 2021ರ ಆಗಸ್ಟ್ 19ರಂದು ನಿರ್ದೇಶಿಸಿತ್ತು. ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 11ರ ಅಡಿ ನಿಯಮಗಳನ್ನು ರೂಪಿಸುವಂತೆ ತಿಳಿಸಿತ್ತು.

ಕೋರ್ಟ್‌ ನಿರ್ದೇಶನದಂತೆ ಸರ್ಕಾರ ಕರಡು ನಿಯಮಗಳನ್ನು ರೂಪಿಸಿದೆ. ಅವುಗಳನ್ನು ಸಚಿವ ಸಂಪುಟದ ಮುಂದೆ ಇಟ್ಟು ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

'ಬೆಳಗಾವಿ ಅಧಿವೇಶನದಲ್ಲಿ ಕರಡು ನಿಯಮಗಳಿಗೆ ಒಪ್ಪಿಗೆ ಪಡೆದುಕೊಳ್ಳಿ'

ಅರ್ಜಿದಾರರ ಪರ ವಕೀಲರು, ಕರಡು ಪ್ರತಿಯನ್ನು ಅರ್ಜಿದಾರರಿಗೂ, ಬಾಲ ನ್ಯಾಯಮಂಡಳಿಗೆ ನೀಡಿದರೆ ಅವುಗಳಲ್ಲಿ ತಿದ್ದುಪಡಿ ಅಗತ್ಯವಿದ್ದರೆ ಸೂಚಿಸಬಹುದು ಎಂದರು. ವಾದ ಆಲಿಸಿದ ಪೀಠ, ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಕರಡು ನಿಯಮಗಳಿಗೆ ಒಪ್ಪಿಗೆ ಪಡೆದುಕೊಳ್ಳಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಇದೇ ವೇಳೆ ಸರ್ಕಾರದ ಪರ ವಕೀಲರು ಮೈಸೂರಿನ ಆಶ್ರಮದಲ್ಲಿ ಹೆತ್ತವರೇ ತಮ್ಮ 12 ದಿನದ ಹೆಣ್ಣು ಮಗುವನ್ನು ಬಿಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ. ತನಿಖೆಯ ಸಮಗ್ರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು-''ಸಂಕಲ್ಪ''ರಂತೆ ಜೀವ ಕಳೆದುಕೊಳ್ಳಬಾರದು: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.