ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಸಿಬಿ ಪೊಲೀಸರು ನಟಿ ರಾಗಿಣಿ ಹಾಗೂ ಇತರೆ ಆರೋಪಿಗಳ ವಿಚಾರಣೆಯನ್ನ ಚುರುಕುಗೊಳಿಸಿದ್ದಾರೆ. ಇದರ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿ, ಪ್ರಕರಣ ಸಂಬಂಧ ನಮಗೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದಿದ್ದಾರೆ.
ಈ ಪ್ರಕರಣದ ಎಲ್ಲಾ ರೀತಿಯ ತನಿಖೆ ಸರಿಯಾಗಿ ನಡೆಯುತ್ತಿದೆ. ಹಾಗೆ ಸಾಕ್ಷ್ಯ ಪಡೆದು ಆರೋಪಿಗಳನ್ನ ಬಂಧಿಸುವುದಾಗಿ ತಿಳಿಸಿದರು.
ಈ ಪ್ರಕರಣದಲ್ಲಿ ನೇರವಾಗಿ ಬಂಧಿಸಲು ಸಾಧ್ಯವಿಲ್ಲ. ಸೂಕ್ತ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣ ಇನ್ನೂ ತುಂಬಾ ಮುಂದೆ ಹೋಗುವುದು ಇದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.