ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ತೊಡಗಿಸಿಕೊಂಡಿದ್ದ ಪೆಡ್ಲರ್ ಒಬ್ಬನನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಚಾಂದ್ ಪಾಷಾ ಬಂಧಿತ ಆರೋಪಿ. ಸಾರ್ವಜನಿಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟ ಮಾಡುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, 5 ಕೆಜಿ 550 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ಈತನ ಸಹಚರನನ್ನು ಬಂಧಿಸಿದಾಗ 4 ಕೆಜಿ 350 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಚಾಂದ್ ಪಾಷಾ ತಪ್ಪಿಸಿಕೊಂಡಿದ್ದ. ಇಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣ ದಾಖಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀವ್ ತಿಳಿಸಿದ್ದಾರೆ.
ಇದನ್ನೂ ಓದಿ: ವಿಚ್ಛೇದಿತ ಪತಿಗೆ ಜೀವನಾಂಶ ನೀಡುವಂತೆ ಪತ್ನಿಗೆ ಹೈಕೋರ್ಟ್ ಆದೇಶ