ಬೆಂಗಳೂರು : ಗೂಗಲ್‌ನಲ್ಲಿ ಮಾಹಿತಿ ಪಡೆದುಕೊಂಡು ಮಾದಕ ಸರಬರಾಜು ದಂಧೆಗಿಳಿದಿದ್ದ ಸೆಕ್ಯೂರಿಟಿ ಗಾರ್ಡ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ ನೇಪಾಳ ಮೂಲದ ಲೋಕೇಂದ್ರನಾಥ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ ಆರೋಪಿ ಮಾದಕ ವಸ್ತು ಮಾರಾಟದಲ್ಲಿ ಆಸಕ್ತಿ ಹೊಂದಿದ್ದ. ಅದರಂತೆ ಗೂಗಲ್‌ನಲ್ಲಿ ಮಾದಕವಸ್ತುಗಳ ಬಗ್ಗೆ ತಿಳಿದುಕೊಂಡು ದಂಧೆ ಆರಂಭಿಸಿದ್ದ.
ಈತ ತನ್ನ ಸ್ಥಿರ ಗ್ರಾಹಕರಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದುದಾಗಿ ತಿಳಿದು ಬಂದಿದೆ. ಸದ್ಯ ಬಾಗಲೂರು ವ್ಯಾಪ್ತಿಯಲ್ಲಿ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಬಂಧಿತನಿಂದ 3 ಲಕ್ಷ ಮೌಲ್ಯದ 10 ಗ್ರಾಂ ಎಂಡಿಎಂಎ ಕ್ರಿಸ್ಟಲ್, 80 ಗ್ರಾಂ ಚರಸ್ ವಶಕ್ಕೆ ಪಡೆದಿದ್ದಾರೆ.
ಓದಿ : ನಡುರಸ್ತೆಯಲ್ಲೇ ತಂದೆ-ತಾಯಿಯನ್ನು ಚಾಕುವಿನಿಂದ ಇರಿದು ಕೊಂದ ಮಗ!