ETV Bharat / city

ಮಾದಕವಸ್ತು ರಾಷ್ಟ್ರಮಟ್ಟದ ದೊಡ್ಡ ಪಿಡುಗು: ಗೃಹ ಸಚಿವ ಬೊಮ್ಮಾಯಿ - Selling drugs

ರಾಷ್ಟ್ರಮಟ್ಟದಲ್ಲಿ ದೊಡ್ಡ ಪಿಡುಗಾಗಿರುವ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದಿಂದ ಮಹಾಸಮರ ಸಾರಲಾಗಿದ್ದು, ಮಾದಕ ವಸ್ತುಗಳ ಪೂರೈಕೆ ವಿಚಾರದಲ್ಲಿ 'ಝಿರೋ ಟಾಲರೆನ್ಸ್' ಅನುಸರಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

drugs-are-a-nationwide-major-pandemic
ಗೃಹ ಸಚಿ ಬಸವರಾಜ ಬೊಮ್ಮಾಯಿ
author img

By

Published : Mar 10, 2020, 6:05 PM IST

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ದೊಡ್ಡ ಪಿಡುಗಾಗಿರುವ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರ ಮಹಾಸಮರ ಸಾರಿದೆ. ಮಾದಕ ವಸ್ತುಗಳ ಪೂರೈಕೆ ವಿಚಾರದಲ್ಲಿ 'ಝಿರೋ ಟಾಲರೆನ್ಸ್' ಅನುಸರಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಮತ್ತು ರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿರುವ ಈ ಪಿಡುಗನ್ನು ನಿಯಂತ್ರಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಈ ದಂಧೆ ಮೂಲ ಪತ್ತೆ ಮಾಡುವುದು ಕ್ಲಿಷ್ಟಕರ ಸಮಸ್ಯೆ. ಅಂಚೆ, ಇಂಟರ್​​​ನೆಟ್​ ಮೂಲಕ ಈ ದಂಧೆ ನಡೆಯುತ್ತಿದೆ. 'ಡೀಪ್‍ವೆಬ್' ಎಂಬ ಅಂತರ್ಜಾಲದ ಮೂಲಕ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸಿಕೊಳ್ಳಲಾಗುತ್ತಿದೆ. ಇದನ್ನು ಪತ್ತೆ ಮಾಡಿ ನಾಶಗೊಳಿಸಿದ್ದೇವೆ. ಡೀಪ್‍ವೆಬ್ ಡಾರ್ಕ್‍ವೆಬ್ ಆಗಿದ್ದು, ಅದರ ಕಾರ್ಯಾಚರಣೆ ಬಂದ್ ಮಾಡಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಬೆಂಗಳೂರು ಮಹಾನಗರ ಅಲ್ಲದೆ, ಇಡೀ ರಾಜ್ಯದಲ್ಲಿ ಇದು ವ್ಯಾಪಿಸಿದೆ. ಶಾಲಾ-ಕಾಲೇಜು, ಶೈಕ್ಷಣಿಕ ಸಂಸ್ಥೆಗಳ ಸಮೀಪದಲ್ಲಿ ಮಾದಕ ವಸ್ತುಗಳ ಮಾರಾಟ ನಿರಂತರವಾಗಿ ನಡೆಯುತ್ತಿದೆ. ಸ್ಪೀಡ್​​ಪೋಸ್ಟ್, ವಿದೇಶಗಳಿಂದ ಆರ್ಡಿನರಿ ಪೋಸ್ಟ್​​ನಲ್ಲೂ ಪೂರೈಕೆಯಾಗುತ್ತಿದೆ. ಈ ಸಂಬಂಧ ಈಗಾಗಲೇ ನಾಲ್ವರು ಅಂಚೆ ಇಲಾಖೆಯ ಅಧಿಕಾರಿಗಳನ್ನು ಬಂಧಿಸಲಾಗಿದೆ. 2019ರಲ್ಲಿ 1,652 ಪ್ರಕರಣಗಳು ಪತ್ತೆಯಾಗಿವೆ. ಹಲವಾರು ಜನರನ್ನು ಬಂಧಿಸಿದ್ದೇವೆ ಎಂದು ಸಚಿವರು ಸದನಕ್ಕೆ ವಿವರಿಸಿದರು.

ಸಿಇಎನ್ ಪೊಲೀಸ್ ಠಾಣೆ ಆರಂಭ: ಮಾದಕ ವಸ್ತುಗಳ ನಿಗ್ರಹಿಸಲು ಮತ್ತು ಸೈಬರ್ ಅಪರಾಧಗಳನ್ನು ಹತ್ತಿಕ್ಕಲು ಬೆಂಗಳೂರಿನಲ್ಲೇ 8 ಸೆನ್ (ಸಿಇಎನ್) ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ. ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಒಂದೊಂದು ಪೊಲೀಸ್ ಠಾಣೆ ಆರಂಭಿಸಲಾಗಿದೆ ಎಂದರು.

ಮಾದಕ ವಸ್ತು ನಿಯಂತ್ರಣ ಕಾಯ್ದೆಯನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ. ಮಾದಕ ವಸ್ತುಗಳ ನಿಯಂತ್ರಣಕ್ಕೆ ದಕ್ಷ ಅಧಿಕಾರಿಗಳನ್ನು ನಿಯೋಜಿಸುತ್ತೇವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಪ್ರತಿನಿತ್ಯ ಕಾರ್ಗೋಸೆಕ್ಟರ್​​ನಲ್ಲಿ ಪ್ರತಿನಿತ್ಯ ತಪಾಸಣೆ ಮಾಡಲಾಗುತ್ತಿದೆ. ಅದಕ್ಕಾಗಿ ವಿಶೇಷ ಶ್ವಾನದಳ ಕಾರ್ಯಾಚರಣೆ ಮಾಡುತ್ತಿದೆ ಎಂದು ವಿವರಿಸಿದರು.

ಮಾದಕ ವಸ್ತುಗಳ ಪೂರೈಕೆ, ಸಾಗಣೆ ದಂಧೆ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಗೃಹ ಸಚಿವರ ಸ್ಪಷ್ಟನೆ

ಈಗಾಗಲೇ ನೆದರ್​ಲ್ಯಾಂಡ್​, ಕೆನಡಾ, ದಕ್ಷಿಣ ಆಫ್ರಿಕಾ ವ್ಯಕ್ತಿಗಳನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಾದಕ ವಸ್ತು ಪೂರೈಕೆದಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಶಾಲಾ-ಕಾಲೇಜುಗಳ ಸುತ್ತಮುತ್ತ ಪಿಂಕ್ ಗಸ್ತು ವಾಹನ ಮತ್ತು ಹೊಯ್ಸಳ ವಾಹನಗಳ ಗಸ್ತು ಹೆಚ್ಚು ಮಾಡಲಾಗಿದೆ. ರಸ್ತೆ ಬದಿ, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ, ಹಾಸ್ಟೆಲ್‍ಗಳಲ್ಲಿ ಪಾನ್ ಶಾಪ್‍ಗಳಲ್ಲಿ ಸಿಂಥೆಟಿಕ್ ರೂಪದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.

ಅಭಿಯಾನ: ಏಪ್ರಿಲ್​​​ನಲ್ಲಿ ಮಾದಕ ವಸ್ತುಗಳಿಂದಾಗುವ ಹಾನಿ ಮತ್ತು ಅದನ್ನು ತಡೆಗಟ್ಟುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅಭಿಯಾನವನ್ನು ಇಲಾಖೆ ಪ್ರಾರಂಭಿಸಲಿದೆ. ಸರ್ಕಾರದಿಂದ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯವಿಲ್ಲ. ಪಾಲಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ಎಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ ಕೆ.ಜೆ.ಜಾರ್ಜ್ ಮಾತನಾಡಿ, ಬೆಂಗಳೂರು ನಗರದಾದ್ಯಂತ ಮಾದಕ ವಸ್ತುಗಳ ಪೂರಕೆ ವ್ಯಾಪಕವಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಹೊರ ರಾಜ್ಯಗಳು ಸೇರಿದಂತೆ ವಿದೇಶಗಳಿಂದಲೂ ಡ್ರಗ್ಸ್ ಪೂರೈಕೆಯಾಗುತ್ತಿದೆ. ಕೆಲವರು ಇದನ್ನೇ ದಂಧೆಯನ್ನಾಗಿದ್ದಾರೆ. ಅಂತರ್ಜಾಲದ ಮೂಲಕವೂ ತರಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದನ್ನು ತಡೆಯಲು ಜಾಗೃತದಳವನ್ನು ಮತ್ತಷ್ಟು ಬಿಗಿಗೊಳಿಸಬೇಕು. ಇದೀಗ ಎಲ್ಲೆಡೆ ಕೊರೊನಾ ವೈರಸ್ ಹರಡುತ್ತಿದ್ದು, ಇದನ್ನು ಮುಂದೊಂದು ದಿನ ನಿಗ್ರಹಿಸಬಹುದಾಗಿದೆ. ಆದರೆ ಮಾದಕ ವಸ್ತುಗಳ ದಂಧೆ ಶಾಶ್ವತ ವೈರಸ್‍ಆಗಿ ಕಾಡುವಂತಾಗಿದೆ. ಇದರ ಕಡಿವಾಣಕ್ಕೆ ಸಮರ್ಪಣಾ ಭಾವವಿರುವ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.