ಬೆಂಗಳೂರು: ಮಹಾರಾಷ್ಟ್ರ, ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಿಕ್ಕೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ, ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಕೊಡಗು, ಮೈಸೂರು, ಬೆಳಗಾವಿ, ಮಂಗಳೂರು ಮೂಲಕ ರಾಜ್ಯ ಪ್ರವೇಶಿಸುವವರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೊರೊನಾ ವರದಿ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ಎಂದು ಈಗಾಗಲೇ ಸೂಚನೆ ನೀಡಿದ್ದೇವೆ ಎಂದು ಸಚಿವ ಅಶೋಕ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.