ETV Bharat / city

ದತ್ತಪೀಠ ಹಿಂದೂಗಳಿಗೆ ಒಪ್ಪಿಸುವಂತೆ ಆಗ್ರಹಿಸಿ ಅ.13 ರಂದು ದತ್ತಮಾಲಾ ಅಭಿಯಾನ

ಚಿಕ್ಕಮಗಳೂರು ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸುವಂತೆ ಆಗ್ರಹಿಸಿ ಇದೇ ತಿಂಗಳ 13 ರಂದು ದತ್ತ ಮಾಲಾ ಅಭಿಯಾನವನ್ನು ಶಂಕರಮಠದ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿ
author img

By

Published : Oct 10, 2019, 7:56 PM IST

ಬೆಂಗಳೂರು: ಚಿಕ್ಕಮಗಳೂರು ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸುವಂತೆ ಆಗ್ರಹಿಸಿ ಇದೇ ತಿಂಗಳ 13 ರಂದು ದತ್ತ ಮಾಲಾ ಅಭಿಯಾನವನ್ನು ಶಂಕರಮಠದ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯ 'ಚಂದ್ರದ್ರೋಣ' ಪರ್ವತ ಶ್ರೀಗುರು ದತ್ತಾತ್ರೇಯ, ತಾಯಿ ಅರುಂಧತಿ, ಅತ್ರಿ ಋಷಿಗಳ ಪವಿತ್ರ ತಪೋಭೂಮಿ. ಆದರೆ ಕೆಲವು ಆಕ್ರಮಣಕಾರರು ಈ ಪವಿತ್ರ ಸ್ಥಳ ಆಕ್ರಮಿಸಿಕೊಂಡು 'ಬಾಬಾಬುಡನ್' ಎಂದು ಹೇಳುತ್ತಿರುವುದು ಅತ್ಯಂತ ಖಂಡನೀಯ. ಹಿಂದುಗಳ ತಾಳ್ಮೆ ಪರೀಕ್ಷಿಸದೇ, ತಕ್ಷಣ ಈ ಪೀಠವನ್ನು ಹಸ್ತಾಂತರಿಸಬೇಕೆಂದು ಆಗ್ರಹಿಸಿದ್ದಾರೆ.

ಬೆಂಗಳೂರು ನಗರದಿಂದ 12 ರಂದು 500 ಮಂದಿ ದತ್ತಮಾಲಾಧಾರಿಗಳು ಚಿಕ್ಕಮಗಳೂರಿಗೆ ಹೊರಡಲಿದ್ದಾರೆ. ಯಡಿಯೂರಪ್ಪ ಅವರಿಗೆ ದತ್ತಪೀಠದ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಅವರ ಅವಧಿಯಲ್ಲೇ ಹಿಂದೂಗಳಿಗೆ ಒಪ್ಪಿಸುವ ಕಾರ್ಯ ನಡೆಯಬೇಕು. ದತ್ತಪೀಠವನ್ನು ಸಂಪೂರ್ಣ ಹಿಂದುಗಳಿಗೆ ಒಪ್ಪಿಸಬೇಕು. ಅಲ್ಲಿರುವ ಅನಧಿಕೃತ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರಿಸಬೇಕು, ಹಿಂದೂ ಅರ್ಚಕರನ್ನು ನೇಮಿಸಬೇಕು, ತ್ರಿಕಾಲ ಪೂಜೆ ನಡೆಯಬೇಕು ಹಾಗೂ ಉರೂಸ್ ನಿಲ್ಲಬೇಕು, ಪೀಠದ ನೂರಾರು ಎಕರೆ ಅತಿಕ್ರಮಣ ತೆರವುಗೊಳಿಸಬೇಕು ಹಾಗೂ ಅಮೂಲ್ಯ ವಸ್ತುಗಳು ಕಣ್ಮರೆಯಾದ ಬಗ್ಗೆ ತನಿಖೆ ನಡೆಸಬೇಕು. ಭಕ್ತರಿಗೆ ಅಡೆತಡೆ ಇಲ್ಲದೇ ದರ್ಶನ, ಪೂಜೆಗೆ ಮುಕ್ತ ಅವಕಾಶ ನೀಡಬೇಕು. ಭಕ್ತರಿಗೆ ಉಚಿತ ಅನ್ನದಾನ ವ್ಯವಸ್ಥೆ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ರು.

Intro:Body:ದತ್ತಪೀಠ ಹಿಂದೂಗಳಿಗೆ ಒಪ್ಪಿಸುವಂತೆ ಆಗ್ರಹಿಸಿ ಅ. 13ರಂದು ದತ್ತಮಾಲಾ ಅಭಿಯಾನ: ಮುತಾಲಿಕ್

ಬೆಂಗಳೂರು: ಚಿಕ್ಕಮಗಳೂರು ದತ್ತ ಪೀಠ ಹಿಂದುಗಳಿಗೆ ಒಪ್ಪಿಸಲು ಆಗ್ರಹಿಸಿ ಇದೇ ದತ್ತ ಮಾಲಾ ಅಭಿಯಾನದ ಶೋಭಯಾತ್ರೆ ಇದೇ ತಿಂಗಳ 13ರಂದು ಚಿಕ್ಕಮಗಳೂರಿನ ಶಂಕರಮಠದ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯ "ಚಂದ್ರದ್ರೋಣ" ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯರ,ತಾಯಿ ಅರುಂಧತಿ, ಅತ್ರಿ ಋಷಿಗಳ ಪವಿತ್ರ ತಪೋಭೂಮಿ. ಆದರೆ ಕೆಲವು ಆಕ್ರಮಣಕಾರರು ಈ ಪವಿತ್ರ ಸ್ಥಳ ಆಕ್ರಮಿಸಿಕೊಂಡು "ಬಾಬಾಬುಡನ್" ಎಂದು ಹೇಳಿತ್ತಿರುವುದು ಅತ್ಯಂತ ಖಂಡನೀಯ. ಹಿಂದುಗಳ ತಾಳ್ಮೆ ಪರೀಕ್ಷಿಸದೇ ತಕ್ಷಣ ಈ ಪೀಠ ಹಿಂದುಗಳಿಗೆ ಹಸ್ತಾಂತರಿಸಬೇಕೆಂದು ಈ ಮೂಲಕ ಆಗ್ರಹಿಸಲಾಗುವುದು ಎಂದರು.
ಬೆಂಗಳೂರು ನಗರದಿಂದ 12ರಂದು 500 ಮಂದಿ ದತ್ತಮಾಲಾಧಾರಿಗಳು ಚಿಕ್ಕಮಗಳೂರಿಗೆ ಹೊರಡಲಿದ್ದಾರೆ. ಯಡಿಯೂರಪ್ಪ ಅವರಿಗೆ ದತ್ತಪೀಠದ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಅವರ ಅವಧಿಯಲ್ಲೇ ಇದನ್ನು ಹಿಂದೂಗಳಿಗೆ ಒಪ್ಪಿಸುವ ಕಾರ್ಯ ನಡೆಯಬೇಕು ಎಂದು ಅವರು ಒತ್ತಾಯಿಸಿದರು.
ದತ್ತಪೀಠ ಸಂಪೂರ್ಣ ಹಿಂದುಗಳಿಗೆ ಒಪ್ಪಿಸಬೇಕು. ಅಲ್ಲಿರುವ ಅನಧಿಕೃತ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರಿಸಬೇಕು, ಹಿಂದೂ ಅರ್ಚಕರನ್ನು ನೇಮಿಸಬೇಕು. ಮುಜಾವರನನ್ನು ತಗೆಯಬೇಕು. ತ್ರಿಕಾಲ ಪೂಜೆ ನಡೆಯಬೇಕು ಹಾಗೂ ಉರೂಸ್ ನಿಲ್ಲಬೇಕು. ಪೀಠದ ನೂರಾರು ಎಕರೆ ಅತಿಕ್ರಮಣ ತೆರವುಗೊಳಿಸಬೇಕು ಹಾಗೂ ಅಮೂಲ್ಯ ವಸ್ತುಗಳು ಕಣ್ಮರೆಯಾದ ಬಗ್ಗೆ ತನಿಖೆ ನಡೆಸಬೇಕು. ಭಕ್ತರಿಗೆ ಅಡೆತಡೆ ಇಲ್ಲದೇ ದರ್ಶನ, ಪೂಜೆಗೆ ಮುಕ್ತ ಅವಕಾಶ ನೀಡಬೇಕು. ಭಕ್ತರಿಗೆ ಉಚಿತ ಅನ್ನದಾನ ವ್ಯವಸ್ಥೆ ಮಾಡಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡಿಸಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ. 370ನೆ ವಿಧಿ ರದ್ದುಪಡಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಜಮ್ಮುವಿನ ರಾಹುಲ್ ಎಂಬ ಯುವ ನಾಯಕ ಉದ್ಘಾಟಿಸಲಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.