ಬೆಂಗಳೂರು: ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಮಾಜಿ ಸಚಿವ ಈ.ತುಕಾರಾಂ ನೇಮಕಗೊಂಡಿದ್ದಾರೆ.
ಮಾಜಿ ಸಚಿವರು ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರ ಶಾಸಕರಾಗಿರುವ ತುಕಾರಾಂ ಅವರನ್ನು ಇಂದಿನಿಂದಲೇ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಲಾಗಿದೆ.
ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ನೇಮಕ ಆದೇಶ ಹೊರಡಿಸಿದ್ದಾರೆ. ಸಿದ್ದರಾಮಯ್ಯ ಆಪ್ತ ವಲಯದಲ್ಲಿ ತುಕಾರಾಂ ಗುರುತಿಸಿಕೊಂಡಿದ್ದಾರೆ. ಇದೀಗ ಅವರನ್ನು ನೇಮಿಸುವ ಮೂಲಕ ಶಾಸಕಾಂಗ ಪಕ್ಷದ ಬೆಳವಣಿಗೆ ಇನ್ನಷ್ಟು ಸುಗಮವಾಗಲಿದೆ.