ETV Bharat / city

ಡಿಕೆಶಿಗೆ ಇಡಿ ಸಮನ್ಸ್​.. ಭಾರತ್​ ಜೋಡೋ ತಡೆಯಲು ಕಿರುಕುಳ: ಕೆಪಿಸಿಸಿ ಅಧ್ಯಕ್ಷರು ಗರಂ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿದೆ.

ed-summon
ಡಿಕೆಶಿಗೆ ಇಡಿ ಸಮನ್ಸ್
author img

By

Published : Sep 15, 2022, 5:43 PM IST

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರಿಗೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿ ಮಾಡಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೇ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ.

  • #BharatJodoYatra ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ.
    ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್‌ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ.

    — DK Shivakumar (@DKShivakumar) September 15, 2022 " class="align-text-top noRightClick twitterSection" data=" ">

ಇಡಿ ಜಾರಿ ಮಾಡಿದ ಸಮನ್ಸ್​ ಬಗ್ಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್​, "ಭಾರತ್ ಜೋಡೋ ಯಾತ್ರೆ ಮತ್ತು ವಿಧಾನಸಭೆ ಅಧಿವೇಶನದ ನಡೆಯುತ್ತಿರುವ ಮಧ್ಯೆ ಇಡಿ ವಿಚಾರಣೆಗೆ ಹಾಜರಾಗಲು ಸಮನ್ಸ್​ ನೀಡಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಆದರೆ, ಕಿರುಕುಳ ನೀಡಲೆಂದೇ ಈ ಸಮನ್ಸ್​ ನೀಡಲಾಗಿದೆ. ಈ ಮೂಲಕ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಳೆದೆರಡು ದಿನಗಳಿಂದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಲ್ಲದೇ, ಪಕ್ಷದ ನಾಯಕ ರಾಹುಲ್​ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಆಗಮಿಸುವ ತಯಾರಿಯಲ್ಲಿ ನಿರತರಾಗಿದ್ದಾರೆ.

ಪ್ರಕರಣವೇನು?: ಡಿ.ಕೆ ಶಿವಕುಮಾರ್ 800 ಕೋಟಿ ರೂಪಾಯಿ ಬೇನಾಮಿ ಆಸ್ತಿ ಮಾಡಿದ್ದಾರೆ‌. ಕುಟುಂಬಸ್ಥರ ಹೆಸರಿನಲ್ಲಿ 200 ಕೋಟಿ ರೂ. ಠೇವಣಿ ಇದೆ. 20ಕ್ಕೂ ಅಧಿಕ ಬ್ಯಾಂಕ್, 317 ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಮೂಲಕ ಅಕ್ರಮ ಹಣ ವರ್ಗಾವಣೆ.‌ ಮಗಳ ಹೆಸರಿನಲ್ಲಿ 108 ಕೋಟಿ ರೂಪಾಯಿ ಅಕ್ರಮ ವ್ಯವಹಾರ ನಡೆದಿರುವ ಆರೋಪದ ಮೇಲೆ ಇಡಿ ದಾಳಿ ನಡೆಸಿತ್ತು.

2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧದ ಪ್ರಕರಣವನ್ನು ಇಡಿಗೆ ವರ್ಗಾಯಿಸಲಾಗಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ಓದಿ: ಧರ್ಮದ ಹೆಸರಿನಲ್ಲಿ ಭಯೋತ್ಪಾದಕರಾಗುತ್ತಿದ್ದಾರೆ, ಮತಾಂತರ ಕಾನೂನುಬದ್ಧ ಮಾಡುತ್ತಿದ್ದೇವೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.