ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಸಚಿವ ಸುರೇಶ್ ಕುಮಾರ್ ಅವರು ಪಿಯು ಪರೀಕ್ಷೆಯಲ್ಲಾದ ಲೋಪದೋಷಗಳನ್ನು ಸರಿಪಡಿಸಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ರು.
ಇದರ ಜೊತೆಗೆ ಸಾಮಾಜಿಕ ಕಾರ್ಯಕರ್ತರು, ಪೊಲೀಸರು ಕೂಡಾ ಪರೀಕ್ಷೆಗೆ ಸಹಕಾರ ಕೊಡುತ್ತಿದ್ದಾರೆ ಎಂದ ಸಚಿವರು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಬುದ್ದಿ ಮಾತು ಹೇಳಿದರು.
ವಿದ್ಯಾರ್ಥಿಗಳ ಶಿಸ್ತನ್ನು ಪೋಷಕರು ಸಹ ಕಲಿಯಲಿ
ಪರೀಕ್ಷಾ ಕೇಂದ್ರದ ಹೊರಗಡೆ ಪೋಷಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೋಷಕರಲ್ಲಿ ಮತ್ತೆ ಮನವಿ ಮಾಡುತ್ತೇನೆ ಮಕ್ಕಳನ್ನ ಪರೀಕ್ಷಾ ಕೇಂದ್ರದಲ್ಲಿ ಬಿಟ್ಟು ಹೊರಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಈ ಪರೀಕ್ಷೆಯಿಂದ ವಿದ್ಯಾರ್ಥಿಗಳ ಶಿಸ್ತನ್ನು ಪೋಷಕರು ಸಹ ಕಲಿಯಲಿದ್ದಾರೆ ಎಂದರು.
ಎಸ್ಎಸ್ಎಲ್ಸಿ ಪರೀಕ್ಷೆಗೆ ಕೇರಳದ 367 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಂತಾರಾಜ್ಯದ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಎಂದು ಸ್ಪಷ್ಟನೆ ನೀಡಿದ್ದಾರೆ.