ETV Bharat / city

ಸ್ಥಳೀಯ ಸಂಸ್ಥೆಗಳ ಚುನಾವಣೆ: ಕ್ಷೇತ್ರ ವಿಂಗಡಣೆ-ಮೀಸಲಾತಿ ನಿಗದಿಗೆ ಗಡುವು ವಿಧಿಸಿದ ಹೈಕೋರ್ಟ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಕ್ಷೇತ್ರ ಪುನರ್​ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪಟ್ಟಿ ಅಂತಿಮಗೊಳಿಸಲು ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ 12 ವಾರಕ್ಕಿಂತ ಹೆಚ್ಚಿನ ಕಾಲಾವಕಾಶ ಕೇಳದಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

High Court
ಹೈಕೋರ್ಟ್
author img

By

Published : May 24, 2022, 8:27 PM IST

ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದಿರುವ ತಾಲೂಕು ಪಂಚಾಯತ್​ ಹಾಗೂ ಜಿಲ್ಲಾ ಪಂಚಾಯತ್​ಗಳಿಗೆ ಚುನಾವಣೆ ನಡೆಸುವ ಸಂಬಂಧ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪಟ್ಟಿ ಅಂತಿಮಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 12 ವಾರಗಳ ಗಡುವು ವಿಧಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ತ್ವರಿತವಾಗಿ ಪಟ್ಟಿ ನಿಗದಿ ಮಾಡುವಂತೆ ಹಾಗೂ 12 ವಾರಕ್ಕಿಂತ ಹೆಚ್ಚಿನ ಕಾಲಾವಕಾಶ ಕೇಳದಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪೀಠಕ್ಕೆ ಮಾಹಿತಿ ನೀಡಿ, ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಕ್ಷೇತ್ರ ಮೀಸಲಾತಿ ನಿಗದಿಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಈ ಕಾರ್ಯ ಪೂರ್ಣಗೊಳಿಸಲು 12 ವಾರ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೇ, ಈ ಕುರಿತ ಮೆಮೊವನ್ನು ಪೀಠಕ್ಕೆ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲರಾದ ಕೆ.ಎನ್ ಫಣೀಂದ್ರ, ರಾಜ್ಯ ಸರ್ಕಾರ ಇದಕ್ಕಿಂತ ಹೆಚ್ಚಿನ ಸಮಯ ಕೇಳಬಾರದು ಎಂದು ಪೀಠಕ್ಕೆ ಕೋರಿದರು. ಈ ಹಿನ್ನೆಲೆಯಲ್ಲಿ ಪಟ್ಟಿಗಳನ್ನು ಸಿದ್ಧಪಡಿಸಲು ಸರ್ಕಾರ 12 ವಾರಕ್ಕಿಂಗ ಹೆಚ್ಚು ಸಮಯ ಕೇಳಬಾರದು ಎಂದು ಗಡುವು ವಿಧಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್‌ ವೇಳೆಗೆ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯತ್​ ಹಾಗೂ ತಾಲೂಕು ಪಂಚಾಯತ್​ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಈ ಸಂಬಂಧ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿ, ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ಚುನಾವಣೆಗೆ ದಿನಾಂಕ ಘೋಷಿಸುವ ವೇಳೆಗೆ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದರಿಂದಾಗಿ ಚುನಾವಣೆ ನಡೆಸಲಾಗದ ಆಯೋಗ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ತೀರ್ಪು ನೀಡಿದ್ದು, ಅವಧಿ ಮುಗಿದ ನಂತರ ಖಾಲಿ ಉಳಿಸದಂತೆ ನಿರ್ದೇಶಿಸಿದೆ. ಅದರಂತೆ, ರಾಜ್ಯದಲ್ಲೂ ಜಿಲ್ಲಾ ಪಂಚಾಯತ್​ ಹಾಗೂ ತಾಲೂಕು ಪಂಚಾಯತ್​ಗಳಿಗೆ ಚುನಾವಣೆ ನಡೆಸಬೇಕಾಗಿದೆ.

ಇದನ್ನೂ ಓದಿ: ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಹುತಾತ್ಮ.. 7 ವರ್ಷದ ಮಗಳಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.