ETV Bharat / city

ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಖದೀಮನಿಗೆ ಗುಂಡೇಟು - ಆರೋಪಿ ಕಾಲಿಗೆ ಗುಂಡು ಹೊಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು

ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಖದೀಮನ ಕಾಲಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಗುಂಡು ಹಾರಿಸಿ, ಆತನನ್ನು ಬಂಧಿಸಿದ ಘಟನೆ ಆನೇಕಲ್​ ಬಳಿ ನಡೆದಿದೆ.

electronic-city-police-shot-theft-in-anekal
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ
author img

By

Published : Sep 24, 2020, 9:30 PM IST

ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರಿನ 10ಕ್ಕೂ ಹೆಚ್ಚು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕೃಷ್ಣ, ಕಳ್ಳತನ, ಕಿಡ್ನ್ಯಾಪ್​​, ಬೆದರಿಕೆ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಇಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಲು ಬೆಟ್ಟದಾಸನಪುರ ಬಳಿ ತೆರಳಿದ್ದರು.

ಬಂಧನಕ್ಕೆ ತೆರಳಿದ ವೇಳೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಖಾಕಿ ಗುಂಡೇಟು

ಈ ವೇಳೆ ಪೊಲೀಸರನ್ನು ಕಂಡ ಕೃಷ್ಣ ಪರಾರಿಯಾಗಲು ಯತ್ನಿಸಿದ್ದಾನೆ. ಅಲ್ಲದೆ ಎಸ್ಐ ಅಯ್ಯಪ್ಪನ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಕಿಶೋರ್, ಖದೀಮನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ತಿಳಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.