ETV Bharat / city

ಶಾಲಾ‌ ಮಕ್ಕಳ ದಾಖಲಾತಿ‌ ಪ್ರಕ್ರಿಯೆಯಲ್ಲಿ ಸರ್ಕಾರಿ ಶಾಲೆಗಳದ್ದೇ ಮೇಲುಗೈ: ಇಲ್ಲಿದೆ ಅಂಕಿಅಂಶ..

ಕೊರೊನಾ ಹಿನ್ನೆಲೆಯಲ್ಲಿ ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ‌ ಪೋಷಕರು ಮುಖ ಮಾಡಿದ್ದಾರೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ- ಅನ್ಬು ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

govt-schools
ಶಿಕ್ಷಣ ಇಲಾಖೆ
author img

By

Published : Jul 1, 2021, 4:09 PM IST

ಬೆಂಗಳೂರು: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಸರ್ಕಾರಿ ಶಾಲೆಗಳು ಮುಂದಾಗಿವೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ 1ರಿಂದ 10ನೇ ತರಗತಿವರೆಗಿನ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ.

ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾದ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. ಅದ್ರಲ್ಲೂ ಖಾಸಗಿ ಶಾಲೆಯಿಂದ ಸರ್ಕಾರಿ‌ ಶಾಲೆಗಳತ್ತ ಮಕ್ಕಳು ಮುಖ ಮಾಡುತ್ತಿದ್ದು, ಜೂ.15 ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರ್ಪಡೆಯಾಗಿದ್ದಾರೆ.

ರಾಜ್ಯದಲ್ಲಿ ಕಳೆದ ಜೂನ್‌ 15ರಿಂದ ಸರ್ಕಾರಿ‌ ಶಾಲೆಗೆ ಒಟ್ಟು 16,53,613 ಮಕ್ಕಳು ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ.‌ ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರ್ಪಡೆಯಾಗಿದ್ದಾರೆ. ಅಲ್ಲದೆ ಜಿಲ್ಲೆಗಳ ದಾಖಲಾತಿಯಲ್ಲಿಯೂ ಸರ್ಕಾರಿ ಶಾಲೆಗಳೇ ಮೊದಲ ಸ್ಥಾನ‌ದಲ್ಲಿವೆ. ಹಾವೇರಿ, ಮಂಡ್ಯ, ಮೈಸೂರು, ದಾವಣಗೆರೆ, ಬೀದರ್, ಕಲಬುರ್ಗಿ, ಯಾದಗಿರಿ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಶಿರಸಿ, ಕಾರವಾರ, ಮಂಗಳೂರು, ಕೋಲಾರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಹಾಗು ಬೆಂ. ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗೆ ಮಕ್ಕಳ‌ ದಾಖಲಾತಿ ಪ್ರಮಾಣ ಖಾಸಗಿ ಶಾಲೆಗಳಿಗಿಂತ ಹೆಚ್ಚಾಗಿದೆ.‌‌

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ಹೆಚ್ಚಳ ವಿಚಾರವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ಮಾತನಾಡಿ, "ಕೊರೊನಾ ಹಿನ್ನೆಲೆಯಲ್ಲಿ ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ‌ ಪೋಷಕರು ಮುಖ ಮಾಡಿದ್ದಾರೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. 1-10ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲೇ 16 ಲಕ್ಷಕ್ಕೂ ಹೆಚ್ಚು ಮಕ್ಕಳು‌ ದಾಖಲಾಗಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಪ್ರಯತ್ನ ನಡೆದಿದೆ. ಕಳೆದ 15 ದಿನಗಳಿಂದ ಶಿಕ್ಷಕರು ಮನೆ ಮನೆಗೆ ತೆರಳಿ‌ ಮಕ್ಕಳನ್ನು ಶಾಲೆಗೆ ಕರೆ ತರುವ ಕೆಲಸ ಮಾಡುತ್ತಿದ್ದಾರೆ. ದಾಖಲಾತಿ ಪ್ರಕ್ರಿಯೆ ಏರಿಕೆಯಲ್ಲಿ ಶಿಕ್ಷಕರ ಪರಿಶ್ರಮ ಕೂಡ ಹೆಚ್ಚಿದೆ. ದಾಖಲಾತಿ ಪ್ರಕ್ರಿಯೆ ಇನ್ನು ಕೂಡ ಮುಂದುವರೆಯುತ್ತೆ" ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.