ಬೆಂಗಳೂರು: ಅಧಿವೇಶನ ಮೊಟಕು ಮಾಡುವ ಪ್ರಯತ್ನ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನೆರೆ ಹಾವಳಿ ಬಗ್ಗೆ ಚರ್ಚೆ ನಡೆಯುತ್ತಿದ್ದು, ಜ್ವಲಂತ ಸಮಸ್ಯೆ ಬಗ್ಗೆ ಗಂಭೀರ ಚರ್ಚೆಯಾಗಬೇಕು. ಈ ಹಿನ್ನೆಲೆ ಅಧಿವೇಶನವನ್ನು ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಮುಖ್ಯವಾಗಿ ಸಂತ್ರಸ್ತರ ಸಮಸ್ಯೆ ಚರ್ಚೆಗೆ ಒತ್ತು ನೀಡಬೇಕು, ಹಾಗೂ ವಸತಿ, ಕುಡಿಯುವ ನೀರು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆಯಾಗಬೇಕು ಎಂದರು.
ನಿಯಮಾವಳಿ ವಿರುದ್ಧವಾಗಿ ಸ್ಪೀಕರ್ ಕ್ರಮ ತೆಗೆದುಕೊಂಡಿದ್ದಾರೆ. ನಿಲುವಳಿ ಸೂಚನೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಹೇಳಿದ ಅವರು, ಬಿಜೆಪಿಯವರು ಬರೀ ವಿತ್ತೀಯ ವಿಧೇಯಕ ಪಾಸ್ ಮಾಡೋಕೆ ನೋಡ್ತಿದ್ದಾರೆಂದು ಆರೋಪಿಸಿದರು.