ETV Bharat / city

''ಬೆಂಗಳೂರು ಜನತೆ ಬದುಕುಳಿಯೋಕೆ ಕನಿಷ್ಠ 20 ದಿನ ಲಾಕ್​ಡೌನ್ ಮಾಡಿ'' - kumaraswamy on corona

ರಾಜ್ಯ ಮತ್ತು ರಾಜ್ಯದ ರಾಜಧಾನಿಯಲ್ಲಿ ಕೊರೊನಾ ವೇಗವಾಗಿ ಹಬ್ಬತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ex cm hd kumarswamy
ಮಾಜಿ ಸಿಎಂ ಕುಮಾರಸ್ವಾಮಿ
author img

By

Published : Jun 23, 2020, 10:29 AM IST

ಬೆಂಗಳೂರು: ಬೆಂಗಳೂರು ಜನತೆ ಬದುಕುಳಿಯಬೇಕಾದರೆ ಕನಿಷ್ಠ 20 ದಿನ ಸಂಪೂರ್ಣ ಲಾಕ್​ಡೌನ್​ ಮಾಡಬೇಕು. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಲಾಕ್​ಡೌನ್​, ಸೀಲ್​ಡೌನ್ ಮಾಡಿದ್ರೆ ಪ್ರಯೋಜನ ಇಲ್ಲ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

  • ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.‌
    1/3

    — H D Kumaraswamy (@hd_kumaraswamy) June 23, 2020 " class="align-text-top noRightClick twitterSection" data=" ">

ಇದೇ ವೇಳೆ, ಮತ್ತೆರಡು ಟ್ವೀಟ್ ಮಾಡಿರುವ ಹೆಚ್​ಡಿಕೆ ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸುವುದರ ಜೊತೆಗೆ ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದು ಆರೋಪಿಸಿದ್ದಾರೆ.

  • ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
    2/3

ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಬರೀ ಪ್ಯಾಕೇಜ್ ಘೋಷಣೆ ಮಾಡಿದ್ರೆ ಸಾಲೋದಿಲ್ಲ. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್​ ಘೋಷಿಸಿ ಅಂಗೈನಲ್ಲಿ ಅರಮನೆ ತೋರಿಸಬಾರದು ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.