ಬೆಂಗಳೂರು: ಕೋವಿಡ್ ಮತ್ತು ನೆರೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ವರ್ಷ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಜತೆಗೆ ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.
-
ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX
— H D Kumaraswamy (@hd_kumaraswamy) December 14, 2021 " class="align-text-top noRightClick twitterSection" data="
">ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX
— H D Kumaraswamy (@hd_kumaraswamy) December 14, 2021ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX
— H D Kumaraswamy (@hd_kumaraswamy) December 14, 2021
ಕೋವಿಡ್ ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಅಪಾರ ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವುದಿಲ್ಲ ಎಂದಿದ್ದಾರೆ.
-
ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4
— H D Kumaraswamy (@hd_kumaraswamy) December 14, 2021 " class="align-text-top noRightClick twitterSection" data="
">ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4
— H D Kumaraswamy (@hd_kumaraswamy) December 14, 2021ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4
— H D Kumaraswamy (@hd_kumaraswamy) December 14, 2021
ಹಾರ-ತುರಾಯಿ ಹಾಕಿ, ಕೇಕ್ ಕತ್ತರಿಸಿ ಸಂಭ್ರಮಿಸುವುದು ಬೇಡ. ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ ಎಂದು ಹೆಚ್ಡಿಕೆ ಮನವಿ ಮಾಡಿದ್ದಾರೆ.
ಶುಭ ಕೋರಿದ ಮುಖಂಡರು: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಪಕ್ಷದ ಮುಖಂಡರು, ಅಭಿಮಾನಿಗಳು ಶುಭ ಕೋರಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲೇ ಮೊದಲ ಬಾರಿಗೆ ಕಪ್ಪು ಶಿಲೆಯಲ್ಲಿ ಅಪ್ಪು ಪುತ್ಥಳಿ ನಿರ್ಮಾಣ.. ದಾವಣಗೆರೆಯಲ್ಲಿ ಪ್ರತಿಮೆ ಅನಾವರಣ