ETV Bharat / city

ಬ್ಲ್ಯಾಕ್ ಫಂಗಸ್​ಗೆ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ: ಹೆಚ್​ಡಿಕೆ ಕಿಡಿ

ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ ಎಂದು ಹೆಚ್​ಡಿಕೆ ಆತಂಕ ವ್ಯಕ್ತಪಡಿಸಿದ್ದಾರೆ..

hdk
hdk
author img

By

Published : May 16, 2021, 5:34 PM IST

ಬೆಂಗಳೂರು : ಬ್ಲ್ಯಾಕ್ ಫಂಗಸ್ ಸಮಸ್ಯೆ ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ‌ಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಯಲ್ಸ್ ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ.

ಬ್ಲ್ಯಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

  • ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ.
    4/5

    — H D Kumaraswamy (@hd_kumaraswamy) May 16, 2021 " class="align-text-top noRightClick twitterSection" data=" ">
Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣವು ಕೇಂದ್ರ ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು.
ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ. ಈ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು ಹೇಳುತ್ತಲೇ ಬಂದಿದ್ದಾರೆ.
ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಆಗ್ರಹಿಸಿದ್ದಾರೆ.
  • ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ.
    1/4

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು 'ರಾಜಕೀಯ'ವೆಂದು ಭಾವಿಸಿದ್ದಾರೆ.
ಪಿಡುಗೊಂದು ಕಾಡುವಾಗ 'ಹಿಂದೆಂದೂ ನೋಡಿರದಷ್ಟು ಜನಸ್ತೋಮ' ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಘರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಟಾಂಗ್ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.