ETV Bharat / city

ಕನ್ನಡಿಗರು ಎಲ್ಲ ತಾರತಮ್ಯ ಸಹಿಸಿದ್ದಾರೆ, ಉಸಿರು ಕಿತ್ತುಕೊಳ್ಳವುದನ್ನು ಸಹಿಸುವುದು ಹೇಗೆ?: ಕೇಂದ್ರಕ್ಕೆ ಹೆಚ್​ಡಿಕೆ ಪ್ರಶ್ನೆ

author img

By

Published : May 7, 2021, 12:21 AM IST

ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

hdk
hdk

ಬೆಂಗಳೂರು: ಕರ್ನಾಟಕಕ್ಕೆ ನಿತ್ಯ 1200 ಟನ್‌ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. 'ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಹೆಚ್ಚಿಸಿದರೆ ಆರೋಗ್ಯ ವ್ಯವಸ್ಥೆ ಕುಸಿಯಲಿದೆ' ಎಂದು ವಾದಿಸಿದೆ. ಕರ್ನಾಟಕದಿಂದ ಎಲ್ಲವನ್ನೂ ಪಡೆದ ಕೇಂದ್ರ, ರಾಜ್ಯಕ್ಕೆ ಇನ್ನೆಷ್ಟು ವಂಚಿಸಬೇಕೆಂದಿದೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯಕ್ಕೆ ನಿತ್ಯ 1700 ಟನ್‌ ಆಮ್ಲಜನಕದ ಅಗತ್ಯವಿದೆ. ಆದರೂ, 1200 ಟನ್‌ ಆಮ್ಲಜನಕ ಇದ್ದರೆ ಪರಿಸ್ಥಿತಿ ಹೇಗೋ ನಿಭಾಯಿಸಬಹುದು. ಕರ್ನಾಟಕದಲ್ಲಿ ಹೆಚ್ಚು ಕಡಿಮೆ 1200 ಟನ್‌ಗೂ ಅಧಿಕ ಪ್ರಮಾಣದ ಆಮ್ಲಜನಕವೂ ಉತ್ಪಾದನೆಯಾಗುತ್ತಿದೆ. ಆದರೆ, ನಮ್ಮಿಂದ ಆಮ್ಲಜನಕ ಕಿತ್ತುಕೊಳ್ಳುತ್ತಿರುವ ಕೇಂದ್ರ ಪೂರೈಸುತ್ತಿರುವುದು 865-965 ಟನ್‌ ಮಾತ್ರ. ಅನುದಾನದಲ್ಲಿ ತಾರತಮ್ಯ, ಜಿಎಸ್‌ಟಿ ಬಾಕಿಯಲ್ಲಿ ತಾರತಮ್ಯ, ನೆರೆ-ಬರ ಪರಿಹಾರದಲ್ಲಿ ಮಾಡಲಾದ ತಾರತಮ್ಯವನ್ನು ಕರ್ನಾಟಕ, ಕನ್ನಡಿಗರು ಹೇಗೋ ಸಹಿಸಿದ್ದಾರೆ. ಆದರೆ, ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ? ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್‌ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ ಎಂದು ಹೆಚ್​ಡಿಕೆ ಒತ್ತಾಯಿಸಿದ್ದಾರೆ.

ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಇಂತಹ ತಾರತಮ್ಯವನ್ನು ಪ್ರಶ್ನಿಸಬೇಕು. ಇಲ್ಲಿಯವರೆಗೆ ಬಾಯಿಗೆ ಬೀಗ ಹಾಕಿಕೊಂಡಿರುವ ಬಿಜೆಪಿ ಸಂಸದರು, ಈಗ ಜನರ ಜೀವ ಉಳಿಸುವುದಕ್ಕಾದರೂ ಬಾಯಿ ಬಿಡಲಿ. ರಾಜ್ಯದಿಂದ ಶಕ್ತಿ ಪಡೆದಿರುವ ಕೇಂದ್ರ ಅದೇ ಶಕ್ತಿಯನ್ನು ಬಳಸಿಕೊಂಡು ರಾಜ್ಯದ ಮೇಲೆ ಗದಾಪ್ರಹಾರ ನಡೆಸುತ್ತಿರುವುದನ್ನು ಜನ ಗಮನಿಸಲಿ ಎಂದಿದ್ದಾರೆ. (ಕೊರೊನಾ ತಡೆಗೆ ಲಾಕ್‌ಡೌನ್ ಅನಿವಾರ್ಯ.. ಬಡವರಿಗೆ 1 ತಿಂಗಳ ಆರ್ಥಿಕ ನೆರವು ಘೋಷಿಸಿ : ಹೆಚ್​ಡಿಕೆ ಸಲಹೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.