ಬೆಂಗಳೂರು : ಮರದ ಕೊಂಬೆ ಬಿದ್ದು ಎರಡು ವರ್ಷಗಳಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ರೆಚೆಲ್ ಪ್ರಿಷಾ ಕೊನೆಗೂ ಸಾವನ್ನಪ್ಪಿದ್ದಾಳೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
-
ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಕ್ಷೇಮ ವಿಚಾರಿಸಿದ್ದೆ. ಕೆಲ ಸಮಯ ಮಗುವಿನ ಜತೆಯಲ್ಲೇ ಸಮಯ ಕಳೆದಿದ್ದೆ. ಸತತ ಎರಡು ವರ್ಷ ನಿರಂತರವಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ರಚೆಲ್ ಅಗಲಿಕೆ ಸಹಿಸಲು ನನಗೆ ಆಗುತ್ತಿಲ್ಲ. 2/3
— H D Kumaraswamy (@hd_kumaraswamy) February 10, 2022 " class="align-text-top noRightClick twitterSection" data="
">ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಕ್ಷೇಮ ವಿಚಾರಿಸಿದ್ದೆ. ಕೆಲ ಸಮಯ ಮಗುವಿನ ಜತೆಯಲ್ಲೇ ಸಮಯ ಕಳೆದಿದ್ದೆ. ಸತತ ಎರಡು ವರ್ಷ ನಿರಂತರವಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ರಚೆಲ್ ಅಗಲಿಕೆ ಸಹಿಸಲು ನನಗೆ ಆಗುತ್ತಿಲ್ಲ. 2/3
— H D Kumaraswamy (@hd_kumaraswamy) February 10, 2022ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಕ್ಷೇಮ ವಿಚಾರಿಸಿದ್ದೆ. ಕೆಲ ಸಮಯ ಮಗುವಿನ ಜತೆಯಲ್ಲೇ ಸಮಯ ಕಳೆದಿದ್ದೆ. ಸತತ ಎರಡು ವರ್ಷ ನಿರಂತರವಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ರಚೆಲ್ ಅಗಲಿಕೆ ಸಹಿಸಲು ನನಗೆ ಆಗುತ್ತಿಲ್ಲ. 2/3
— H D Kumaraswamy (@hd_kumaraswamy) February 10, 2022
ಮರದ ಕೊಂಬೆ ತಲೆಯ ಮೇಲೆ ಬಿದ್ದು ಗಾಯಗೊಂಡು 702 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ರೆಚೆಲ್ ಪ್ರಿಷಾ ಇಂದು ಉಸಿರು ಚೆಲ್ಲಿರುವ ವಿಷಯ ತಿಳಿದು ಬಹಳ ದುಃಖವಾಯಿತು. ಆ ಮಗು ಬದುಕಿ ಬರುತ್ತಾಳೆಂಬ ನಿರೀಕ್ಷೆ ನನ್ನದಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿರಿ: ಮರದ ಕೊಂಬೆ ಬಿದ್ದು 2 ವರ್ಷದಿಂದ ಜೀವನ್ಮರಣ ಹೋರಾಟ ನಡೆಸಿದ್ದ ಬೆಂಗಳೂರು ಬಾಲಕಿ ಸಾವು
ಟ್ವೀಟ್ ಮಾಡಿರುವ ಹೆಚ್ಡಿಕೆ, ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಕ್ಷೇಮ ವಿಚಾರಿಸಿದ್ದೆ. ಕೆಲ ಸಮಯ ಮಗುವಿನ ಜತೆಯಲ್ಲೇ ಸಮಯ ಕಳೆದಿದ್ದೆ. ಸತತ ಎರಡು ವರ್ಷ ನಿರಂತರವಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ರಚೆಲ್ ಅಗಲಿಕೆ ಸಹಿಸಲು ನನಗೆ ಆಗುತ್ತಿಲ್ಲ ಎಂದು ಹೇಳಿದ್ದಾರೆ. ಆ ಕಂದಮ್ಮನಿಗೆ ಭಗವಂತ ಚಿರಶಾಂತಿ ದಯಪಾಲಿಸಲಿ. ಇಷ್ಟು ದೀರ್ಘಕಾಲ ಮಗು ಮನೆಗೆ ಬರುತ್ತಾಳೆ ಎಂದು ನಂಬಿ ಪರಿತಪಿಸಿದ್ದ ತಂದೆ-ತಾಯಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಇನ್ನಾದರೂ ಈ ಬಗೆಯ ಸಾವುಗಳು ನಿಲ್ಲಲಿ ಹಾಗೂ ಬಿಬಿಎಂಪಿಯ ಇಂಥ ನಿರ್ಲಕ್ಷ್ಯ ಮರುಕಳಿಸುವುದು ಬೇಡ ಎಂದಿದ್ದಾರೆ.