ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಉಪನ್ಯಾಸಕರ ನೇಮಕಕ್ಕೆ ನಡೆಯುತ್ತಿರುವ ಲಿಖಿತ ಪರೀಕ್ಷೆ ನಿಗದಿಯಂತೆ ಇಂದೂ ಕೂಡ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ.
ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಿಜಾಬ್ ವಿವಾದದ ತೀರ್ಪು ಕರ್ನಾಟಕ ಹೈಕೋರ್ಟ್ನಿಂದ ಇಂದು ಹೊರ ಬೀಳಲಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೆ ಪರೀಕ್ಷೆ ಮುಂದೂಡಿಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್ ವಿವಾದದ ಬಗ್ಗೆ ಇಂದು ಮಹತ್ವದ ತೀರ್ಪು ಪ್ರಕಟಿಸಲಿರುವ ರಾಜ್ಯದ ಹೈಕೋರ್ಟ್!
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಮಾರ್ಚ್ 12 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭವಾಗಿದ್ದು, ಇದೇ 16ಕ್ಕೆ ಪರೀಕ್ಷೆಗಳು ಮುಗಿಯಲಿವೆ.