ETV Bharat / city

ಲಾಕ್​ಡೌನ್ ನಡುವೆಯೂ ಅಬಕಾರಿ ಇಲಾಖೆ ಆದಾಯದಲ್ಲಿ ಶೇ.55ರಷ್ಟು ಏರಿಕೆ..

ಏಪ್ರಿಲ್​ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕ ವರದಿಯಲ್ಲಿ ಇಲಾಖೆ 5,954.07 ಕೋಟಿ ರೂ. ಆದಾಯ ಗಳಿಸಿತ್ತು. ಇದು ಕಳೆದ ವರ್ಷದ ಆದಾಯಕ್ಕಿಂತ 2,122.90 ಕೋಟಿ ರೂ. ಹೆಚ್ಚಳವಾಗಿದೆ ಎಂದು ಅಬಕಾರಿ ಇಲಾಖೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ..

ಅಬಕಾರಿ ಇಲಾಖೆ
Excise department
author img

By

Published : Jul 3, 2021, 6:52 PM IST

ಬೆಂಗಳೂರು : ಕೊರೊನಾ ಲಾಕ್​ಡೌನ್​ ಸಂಕಷ್ಟದ ನಡುವೆಯೂ ಅಬಕಾರಿ ಇಲಾಖೆ ಆದಾಯದಲ್ಲಿ ಶೇ.55ರಷ್ಟು ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಇಲಾಖೆಯ ಆದಾಯ ಶೇ.55ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ. ಕಳೆದ ವರ್ಷದ ಕೋವಿಡ್ ಲಾಕ್​ಡೌನ್ ಸಂದರ್ಭದಲ್ಲಿ ಬಾರ್​ಗಳನ್ನು ಸಂಪೂರ್ಣ ಬಂದ್ ಮಾಡಿದ್ದರಿಂದ ಅಬಕಾರಿ ಆದಾಯದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡು ಬಂದಿತ್ತು. ಆದರೆ, ಈ ಬಾರಿಯ ಲಾಕ್​ಡೌನ್​ನಲ್ಲಿ ಸರ್ಕಾರ ಬಾರ್​ಗಳಿಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಹಾಗಾಗಿ, ಇಲಾಖೆಯ ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ನಂತರ ಬೆಳಗ್ಗೆ 6 ರಿಂದ ಸಂಜೆ 5ರವರೆಗೆ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಅಬಕಾರಿ ಆದಾಯ ಹೆಚ್ಚಾಗಲು ಸಹಕಾರಿಯಾಗಿದೆ. ಸೀಮಿತ ಸಮಯವಿದ್ದರೂ ಸಹ ಮದ್ಯದ ಗಳಿಕೆಯಲ್ಲಿ ಶೇ. 55.41ರಷ್ಟು ಆದಾಯ ಹೆಚ್ಚಾಗಿದೆ.

ಏಪ್ರಿಲ್​ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕ ವರದಿಯಲ್ಲಿ ಇಲಾಖೆ 5,954.07 ಕೋಟಿ ರೂ. ಆದಾಯ ಗಳಿಸಿತ್ತು. ಇದು ಕಳೆದ ವರ್ಷದ ಆದಾಯಕ್ಕಿಂತ 2,122.90 ಕೋಟಿ ರೂ. ಹೆಚ್ಚಳವಾಗಿದೆ ಎಂದು ಅಬಕಾರಿ ಇಲಾಖೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

2021-22ರ ಅಬಕಾರಿ ಆದಾಯದ ಬಜೆಟ್ ಅಂದಾಜು 24,580 ಕೋಟಿ ರೂ. ಆಗಿದೆ. ಕಳೆದ ಮೂರು ತಿಂಗಳಲ್ಲಿ ರಾಜ್ಯ ಆ ಗುರಿಯ ಶೇ.24.2ರಷ್ಟು ಸಾಧಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,122.90 ಕೋಟಿ ರೂ. ಹೆಚ್ಚಳವಾಗಿದೆ. ಕೋವಿಡ್ ಲಾಕ್​ಡೌನ್ ಸಂದರ್ಭದಲ್ಲೂ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ.10ರಷ್ಟು ಹೆಚ್ಚು ಲಾಭ ಗಳಿಸಿದೆ.

ಲಾಕ್​ಡೌನ್ ಆದ ಬಳಿಕ ಅಂದ್ರೆ ಏಪ್ರಿಲ್ 1ರಿಂದ ಜೂನ್ 15ರವರೆಗೆ ಅಬಕಾರಿ ಇಲಾಖೆಗೆ 4,500 ಕೋಟಿ ರೂ. ಆದಾಯ ಬಂದಿದೆ. ಇದರಿಂದ ಸಾಮಾನ್ಯ ದಿನಗಳಿಗಿಂತ ಶೇ.10ರಷ್ಟು ಹೆಚ್ಚು ಲಾಭ ಬಂದಂತಾಗಿದೆ ಎಂದು ಕೆ. ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.