ETV Bharat / city

ನಿರ್ಲಕ್ಷ್ಯದ ಪರಮಾವಧಿ: ಫಲ್ಗುಣಿ ನದಿ ಕಲುಷಿತಕ್ಕೆ ಮ.ನ.ಪಾ ವಿರುದ್ಧ ಹೈಕೋರ್ಟ್ ಅಸಮಾಧಾನ - ಫಲ್ಗುಣಿ ನದಿ

ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Bangalore
ಮಂಗಳೂರು ಘನತ್ಯಾಜ್ಯ ಘಟಕದಿಂದ ಫಲ್ಗುಣಿ ನದಿ ಕಲುಷಿತ: ಹೈಕೋರ್ಟ್ ಅಸಮಾಧಾನ
author img

By

Published : Jul 17, 2021, 7:06 AM IST

ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಹೊರಬರುವ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಅಣೆಕಟ್ಟು ಸೇರುವುದನ್ನು ತಡೆಯದ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಘಟಕದ ತ್ಯಾಜ್ಯ ನೀರು ನದಿ ಸೇರುವುದನ್ನು ತಡೆಯುವಲ್ಲಿ ವಿಫಲವಾಗಿರುವ ಪಾಲಿಕೆ ವಿರುದ್ಧ ಇದೊಂದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿತು. ಅಲ್ಲದೇ, ಭೂಭರ್ತಿ ಘಟಕದ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂ ಸೇರದಂತೆ ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳುತ್ತೀರಿ ಎಂಬ ವಿವರಣೆ ನೀಡಿ ಜುಲೈ 26ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ತಾಕೀತು ಮಾಡಿತು.

ಜೂನ್ 24ರಂದು ಕಾನೂನು ಸೇವಾ ಪ್ರಾಧಿಕಾರ, ಘಟಕದ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂ ಸೇರುತ್ತಿರುವ ಕುರಿತು ಹೈಕೋರ್ಟ್​ಗೆ ವರದಿ ಸಲ್ಲಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೀಠ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್​ಪಿಸಿಬಿ) ಕೂಡಲೇ ತನ್ನ ಪರಿಸರ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು. ಈ ಕುರಿತು ಶುಕ್ರವಾರ ವರದಿ ಸಲ್ಲಿಸಿದ ಕೆಎಸ್​ಪಿಸಿಬಿ, ಘಟಕದ ಕಲುಷಿತ ನೀರು ನದಿ ಹಾಗೂ ಡ್ಯಾಂ ಸೇರುತ್ತಿರುವುದು ನಿಜ ಎಂದು ತಿಳಿಸಿತ್ತು. ಹಾಗೆಯೇ, ನೀರಿನ ಮಾದರಿ ಪರೀಕ್ಷೆ ನಡೆಸಿದಾಗ ಅದರಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಈ ನೀರನ್ನು ಸುತ್ತಮುತ್ತಲ 13 ಹಳ್ಳಿಗಳ ಜನ ಕುಡಿಯುತ್ತಾರೆ ಎಂದು ತಿಳಿಸಿತು.

ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಪೀಠ, ವರದಿಯಲ್ಲಿರುವ ಅಂಶಗಳು ಆಘಾತಕಾರಿಯಾಗಿವೆ. ಕುಡಿಯುವ ನೀರು ಮಲಿನಗೊಳ್ಳಲು ಪಾಲಿಕೆಯ ಬೇಜವಾಬ್ದಾರಿಯೇ ಕಾರಣ. ಪಾಲಿಕೆಯನ್ನು ಸೂಪರ್ ಸೀಡ್ ಮಾಡದೆ, ಈ ಸಮಸ್ಯೆಗಳು ಬಹುಶಃ ಬಗೆಹರಿಯಲಾರವು ಎಂದು ಆಕ್ರೋಶ ವ್ಯಕ್ತಪಡಿಸಿತು. ಅಲ್ಲದೇ, ಪಾಲಿಕೆ ಘನತ್ಯಾಜ್ಯ ನಿರ್ವಹಣಾ ನಿಯಮಗಳು-2016ನ್ನು ಉಲ್ಲಂಘಿಸಿರುವುದು ಸ್ಪಷ್ಟ. ಈ ನಿಟ್ಟಿನಲ್ಲಿ ಕೆಎಸ್​ಪಿಸಿಬಿ ಹಿಂಜರಿಯದೇ ನಿಯಮ ಉಲ್ಲಂಘಿಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜುರುಗಿಸಬೇಕು ಎಂದು ಸೂಚಿಸಿತು.

ರಾಜ್ಯ ಸರ್ಕಾರಕ್ಕೆ ಸೂಚನೆ
ರಾಜ್ಯದ ವಿವಿಧ ನಗರ ಪಾಲಿಕೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿ ಜನರು ಹೈಕೋರ್ಟ್​ಗೆ ಹಲವು ಪಿಐಎಲ್ ಅರ್ಜಿಗಳು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಂದ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲನೆ ಮಾಡುತ್ತಿರುವ ಸಂಬಂಧ ವರದಿ ತರಿಸಿಕೊಂಡು 6 ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹಾಗೆಯೇ, ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲಿಸುವಲ್ಲಿ ವಿಫಲವಾಗಿರುವ ಸ್ಥಳೀಯ ಸಂಸ್ಥೆಗಳ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳತ್ತದೆ ಎಂಬ ಬಗ್ಗೆಯೂ ಸ್ಪಷ್ಟಪಡಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಮೇಕೆದಾಟು ಯೋಜನೆ ಶೇ.100ರಷ್ಟು ಜಾರಿ: ದೆಹಲಿಯಲ್ಲಿ ಕರ್ನಾಟಕದ ಜನತೆಗೆ ಭರವಸೆ ನೀಡಿದ ಬಿಎಸ್​ವೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.