ಬೆಂಗಳೂರು: ವಿಧಾನಸೌಧದ ಕಡೆಗೆ ನುಗ್ಗಲು ಹೊರಟ ರೈತರನ್ನು ಪೊಲೀಸರು ತಡೆದಾಗ ರೈತರು ಅರೆಬೆತ್ತಲೆಯಾಗಿ ರಸ್ತೆ ಮೇಲೆ ಮಲಗಿ ಪ್ರತಿಭಟಿಸಿದರು.
ನಗರದ ಮೌರ್ಯ ಸರ್ಕಲ್ನಿಂದ, ಮೈಸೂರು ಬ್ಯಾಂಕ್ ಸರ್ಕಲ್ ಕಡೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಈ ವೇಳೆ ವಿಧಾನಸೌಧದ ಕಡೆಗೆ ನುಗ್ಗಲು ಹೊರಟ ರೈತರನ್ನು ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ರೈತರು, ಅರೆಬೆತ್ತಲೆಯಾಗಿ ರಸ್ತೆ ಮೇಲೆ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದ್ದು, ರೈತರೊಬ್ಬರು ಅಸ್ವಸ್ಥರಾಗಿ ಕುಸಿದು ಬಿದ್ದರು. ಬಳಿಕ ಅವರು ಚೇತರಿಸಿಕೊಂಡಿದ್ದು, ಮತ್ತೆ ರ್ಯಾಲಿ ಮೈಸೂರು ಬ್ಯಾಂಕ್ ಸರ್ಕಲ್ನತ್ತ ಹೊರಟಿತು.
ಓದಿ: ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರತಿಭಟನೆ ಮಾಡುತ್ತಿದೆ: ಸಚಿವ ಆರ್.ಅಶೋಕ್
ಪ್ರತಿಭಟನೆಯಲ್ಲಿ ಐಕ್ಯ ಹೋರಾಟ ಸಮಿತಿ, ಮನೋಹರ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ನೇತೃತ್ವದ ಕಾರ್ಯಕರ್ತರು, ಬೀದಿಬದಿ ವ್ಯಾಪಾರಿಗಳು, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದಾರೆ.