ETV Bharat / city

ಹೈಕೋರ್ಟ್​ನಲ್ಲಿ ಎಫ್​​ಡಿಎ ಪರೀಕ್ಷೆ ರದ್ದು ಪ್ರಸ್ತಾಪ: ಸರ್ಕಾರ, ಕೆಪಿಎಸ್​ಸಿಗೆ ನೋಟಿಸ್ - ಕೆಪಿಎಸ್​ಸಿ 2021

ಎಫ್‌​ಡಿಎ ಪಶ್ನೆ ಪತ್ರಿಕೆ ಸೋರಿಕೆ ವಿವಾದದ ಮಧ್ಯೆ ಸರ್ಕಾರಕ್ಕೆ ತಾಕೀತು ಮಾಡಿ, ಕೆಪಿಎಸ್​ಸಿ ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸರ್ಕಾರ, ಕೆಪಿಎಸ್​ಸಿಗೆ ಹೈಕೋರ್ಟ್ ತಾಕೀತು
ಸರ್ಕಾರ, ಕೆಪಿಎಸ್​ಸಿಗೆ ಹೈಕೋರ್ಟ್ ತಾಕೀತು
author img

By

Published : Jan 25, 2021, 8:12 PM IST

ಬೆಂಗಳೂರು: ನ್ಯಾಯಾಲಯ ಆದೇಶಿಸಿದ್ದರೂ ಶೋಧನಾ ಸಮಿತಿ ರಚಿಸದೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ, ಕೆಪಿಎಸ್‌ಸಿ ಹಾಗೂ ಅದರ ಎಲ್ಲ 11 ಮಂದಿ ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಟಿ. ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿ, ಕೆಪಿಎಸ್‌ಸಿ ನೇಮಕಾತಿಯಲ್ಲಿ ಗೊಂದಲ, ಅಕ್ರಮ ಮತ್ತು ಅವ್ಯವಹಾರ ನಿರಂತರವಾಗಿ ಮುಂದುವರಿದಿದೆ.

ನೇಮಕಾತಿ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಹಲವು ಬಾರಿ ನಿರ್ದೇಶನ ನೀಡಿದ್ದರೂ ಪಾಲನೆಯಾಗಿಲ್ಲ. ಇದರಿಂದಾಗಿ ನೇಮಕಾತಿಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದೆ. ಜನವರಿ 24ರಂದು ನಿಗದಿಯಾಗಿದ್ದ ಎಫ್‌ಡಿಎ ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪರಿಣಾಮ ಪರೀಕ್ಷೆ ಮುಂದೂಡಲ್ಪಟ್ಟಿದ್ದು, ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಕ್ರಮಕ್ಕೆ ಕಡಿವಾಣ ಹಾಕದಿರುವುದು ಮತ್ತು ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದಿರುವುದೇ ಇದಕ್ಕೆಲ್ಲಾ ಕಾರಣ ಎಂದು ವಿವರಿಸಿದರು.

ಇದನ್ನೂ ಓದಿ: ಎಫ್​​ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಇಬ್ಬರು ಕಿಂಗ್​​ಪಿನ್​​ಗಳು ಅಂದರ್

ವಾದ ಆಲಿಸಿದ ಪೀಠ, ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವ ಮುನ್ನ ಶೋಧನಾ ಸಮಿತಿಯನ್ನು ರಚಿಸಲಾಗಿತ್ತೇ? ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರ ಮತ್ತು ಕೆಪಿಎಸ್​ಸಿಗೆ ತಾಕೀತು ಮಾಡಿ, ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ: ನಿಯಮಗಳ ಪ್ರಕಾರ, ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲು ಶೋಧನಾ ಸಮಿತಿ ರಚಿಸಬೇಕು. ಸಮಿತಿ ನೀಡುವ ವರದಿ ಆಧರಿಸಿ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ವಿಧಾನಸಭೆ ಸ್ಪೀಕರ್, ವಿಧಾನಪರಿಷತ್ ಸಭಾಪತಿ ಅವರನ್ನು ಒಳಗೊಂಡ ಉನ್ನತ ಸಮಿತಿ ಸಭೆ ನಡೆಸಿ ಅಧ್ಯಕ್ಷರನ್ನು ನೇಮಕ ಮಾಡಬೇಕು. ಆದರೆ, ಸರ್ಕಾರ ಈ ನಿಯಮಗಳನ್ನು ಪಾಲಿಸದೆ ಕೆಪಿಎಸ್‌ಸಿಗೆ ಸದಸ್ಯರನ್ನು ನೇಮಕ ಮಾಡಿದೆ. ಇದು ಕಾನೂನು ಬಾಹಿರ ಕ್ರಮ ಎಂದು ಅರ್ಜಿದಾರರು ದೂರಿದ್ದಾರೆ.

ಅಲ್ಲದೆ, ರಾಜಕೀಯ ಹಿತಾಸಕ್ತಿಗಳ ಅನುಕೂಲಕ್ಕಾಗಿ ನಿಯಮಗಳನ್ನು ಉಲ್ಲಂಘಿಸಿ ಸದಸ್ಯರನ್ನು ನೇಮಿಸಲಾಗುತ್ತಿದೆ. ಹೀಗಾಗಿ, ಸದಸ್ಯರ ನೇಮಕಾತಿ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಕೆಪಿಎಸ್‌ಸಿ ಅಧ್ಯಕ್ಷರಾಗಿ ಷಡಕ್ಷರಿ ಸ್ವಾಮಿ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಈ ಹಿಂದೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಈ ಸಂಬಂಧ ಸರ್ಕಾರ ಹಾಗೂ ಷಡಕ್ಷರಿ ಸ್ವಾಮಿ ಅವರಿಗೆ ಹೈಕೋರ್ಟ್ ಈಗಾಗಲೇ ನೋಟಿಸ್ ಜಾರಿ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.