ETV Bharat / city

ವಿಧಾನಸಭೆಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ - ವೈದ್ಯಕೀಯ ವಿದ್ಯಾರ್ಥಿ ನವೀನ್‍ ಗ್ಯಾನಗೌಡರ್ ಮೃತದೇಹವನ್ನು ರಾಜ್ಯಕ್ಕೆ ತರುವಲ್ಲಿ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು

ಪೋಲ್ಯಾಂಡ್​ನಿಂದ ದುಬೈಗೆ. ದುಬೈನಿಂದ ಮುಂಜಾನೆ ಬೆಂಗಳೂರಿಗೆ ನವೀನ್ ಮೃತದೇಹ ತರಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಮಾನ ನಿಲ್ದಾಣದಲ್ಲಿ ಕಳೆಬರವನ್ನ ಕುಟುಂಬದವರಿಗೆ ಹಸ್ತಾಂತರಿಸಿದರು ಎಂದು ಹೇಳಿದರು..

felicitation to P m modi in vidhana sabha session
ವಿಧಾನ ಸಭೆಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ
author img

By

Published : Mar 21, 2022, 3:27 PM IST

ಬೆಂಗಳೂರು : ಉಕ್ರೇನ್‌ನಲ್ಲಿ ರಷ್ಯಾ ಕ್ಷಿಪಣಿ ದಾಳಿಗೆ ಮೃತಪಟ್ಟಿದ್ದ ವೈದ್ಯ ವಿದ್ಯಾರ್ಥಿ ನವೀನ್‍ ಗ್ಯಾನಗೌಡರ್ ಮೃತದೇಹವನ್ನು ರಾಜ್ಯಕ್ಕೆ ತರುವಲ್ಲಿ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ವಿಧಾನಸಭೆಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ

ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಸದನದಲ್ಲಿ ಹೇಳಿಕೆ ನೀಡಿ, ಮಾ.1ರಂದು ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರೆ ಗ್ರಾಮದ ನವೀನ್‍ ಮೃತದೇಹವನ್ನು ಹುಟ್ಟೂರಿಗೆ ತರಲಾಗಿದೆ.

ಅತ್ಯಂತ ಕ್ಲಿಷ್ಟಕರ ಸಂದರ್ಭದಲ್ಲಿ ಸುರಕ್ಷಿತವಾಗಿ ಮೃತದೇಹ ತರಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನಿಸಿದೆ. ಇದಕ್ಕಾಗಿ ಪ್ರಧಾನಿ ಅವರಿಗೆ ವಿಶೇಷ ಅಭಿನಂಧನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಇನ್ನು ಉಕ್ರೇನ್ ನಲ್ಲಿ ಸಿಲಿಕಿಕೊಂಡಿದ್ದ ಭಾರತೀಯರನ್ನು ತವರಿಗೆ ಸುರಕ್ಷಿತವಾಗಿ ಕರೆತರಲಾಗಿದೆ. ಪಾಕಿಸ್ತಾನದ ವಿದ್ಯಾರ್ಥಿಗಳು ಭಾರತದ ಭಾವುಟ ಹಿಡಿದು ಸುರಕ್ಷಿತವಾಗಿ ತಮ್ಮ ದೇಶಕ್ಕೆ ತಲುಪಿದ್ದಾರೆ. ಇದಕ್ಕಾಗಿ ಅವರು ಪ್ರಧಾನಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹೀಗಾಗಿ, ಸದನವೂ ಪ್ರಧಾನಿಗೆ ಅಭಿನಂಧನೆ ಸಲ್ಲಿಸಲಾಗುವುದು ಎಂದರು.

ಪೋಲ್ಯಾಂಡ್​ನಿಂದ ದುಬೈಗೆ. ದುಬೈನಿಂದ ಮುಂಜಾನೆ ಬೆಂಗಳೂರಿಗೆ ನವೀನ್ ಮೃತದೇಹ ತರಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಮಾನ ನಿಲ್ದಾಣದಲ್ಲಿ ಕಳೆಬರವನ್ನ ಕುಟುಂಬದವರಿಗೆ ಹಸ್ತಾಂತರಿಸಿದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ರಷ್ಯಾ-ಉಕ್ರೇನ್‍ ಸಂದರ್ಭದಲ್ಲಿ ನಿರೀಕ್ಷೆಗೂ ಮೀರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಳ್ಳೆ ಕೆಲಸ ಮಾಡಿವೆ. ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ಭಾರತೀಯರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ತರುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ವಿಶೇಷವಾಗಿ ನಮ್ಮ ರಾಜ್ಯದ ವೈದ್ಯ ವಿದ್ಯಾರ್ಥಿ ನವೀನ್‍ ದೇಹವನ್ನು ತರಲು ಮುಖ್ಯಮಂತ್ರಿ ಮತ್ತು ಕೇಂದ್ರ ಸರ್ಕಾರ ಮಾಡಿರುವ ಕೆಲಸ ಮರೆಯಲು ಸಾಧ್ಯವಿಲ್ಲ. ಇದು ಜನರ ಮನಸ್ಸಿನಲ್ಲಿ ಉಳಿಯಲಿದೆ ಎಂದು ಪ್ರಶಂಸಿಸಿದರು.

ಇದನ್ನೂ ಓದಿ: ನವೀನ್​ ಮೃತದೇಹ ತಾಯ್ನಾಡಿಗೆ ತರುವಲ್ಲಿ ಯಶಸ್ವಿಯಾಗಿದ್ದೇವೆ, ಇದು ಮೋದಿ ವರ್ಚಸ್ಸು: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.